ಬಂಟ್ವಾಳ: “ಅಕ್ರಮ ಗೋ ಸಾಗಾಟದ ವಿಷಯದಲ್ಲಿ ಕೈ ಹಾಕುವ ಯೋಚನೆ ಮಾಡಿದ್ದರೆ ನೀವು ನಿಮ್ಮ ಕೈಗಳನ್ನು ಮರೆತು ಬಿಡಿ” ಎಂದು ದುರ್ಗವಾಹಿನಿಯ ಸಂಚಾಲಕಿ ದಿವ್ಯಾ ಮಲ್ಯ ಹೇಳಿದ್ದಾರೆ.
ಬುಧವಾರ ವಿಶ್ವ ಹಿಂದು ಪರಿಷತ್, ಬಜರಂಗದಳ, ಹಿಂದು ಜಾಗರಣಾ ವೇದಿಕೆ ಮಂಗಳೂರು ವತಿಯಿಂದ ಬಂಟ್ವಾಳದಲ್ಲಿ ಗೋವಂಶದ ಮೇಲಿನ ಕ್ರೌರ್ಯ, ಗೋಕಳ್ಳತನ, ಅಕ್ರಮ ಗೋಸಾಗಾಟ ವಿರುದ್ಧ ಪ್ರತಿಭಟನೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿ, “ಹಿಂದೂ ಹೆಣ್ಣು ಮಕ್ಕಳ ತಂಟೆಗೆ ಬಂದರೆ ನಿಮ್ಮ ಕಣ್ಣುಗಳನ್ನು ಹಾಗೂ ಅಕ್ರಮ ಗೋ ಸಾಗಾಟದ ವಿಷಯದಲ್ಲಿ ನಿಮ್ಮ ಕೈಗಳನ್ನು ಮರೆತು ಬಿಡುವುದು ಒಳ್ಳೆಯದು” ಎಂದು ಎಚ್ಚರಿಸಿದ್ದಾರೆ.
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಹಿಂದು ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ ಸಂಚಾಲಕ ರಾಧಾಕೃಷ್ಣ ಅಡ್ಯಂತಾಯ ಮಾತನಾಡಿದರು. ಗೋವಂಶವನ್ನು ನಿರ್ಮೂಲನೆ ಮಾಡಲು ಪ್ರಚೋದಿಸುವ ಅಕ್ರಮ ಗೋಸಾಗಾಟವನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖ್ ಸರಪಾಡಿ ಅಶೋಕ ಶೆಟ್ಟಿ, ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಕಲ್ಲಡ್ಕ, ವಿಶ್ವ ಹಿಂದು ಪರಿಷತ್ ವಿಟ್ಲ ಪ್ರಖಂಡ ಅಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ಅಧ್ಯಕ್ಷ ನರಸಿಂಹ ಶೆಟ್ಟಿ, ವಿಶ್ವ ಹಿಂದು ಪರಿಷತ್ ಬಂಟ್ವಾಳ ಪ್ರಖಂಡ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಬಜರಂಗದಳ ಬಂಟ್ವಾಳ ಪ್ರಖಂಡ ಸಂಚಾಲಕ ಅಕೇಶ್, ಪ್ರಮುಖರಾದ ಗುರುರಾಜ ಬಂಟ್ವಾಳ, ಬಿಜೆಪಿ ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ವಜ್ರನಾಥ ಕಲ್ಲಡ್ಕ, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ದೇವಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…