ಕಾಪು: ಕಾಪು ತಾಲೂಕು ಶಿರ್ವ ಗ್ರಾಮದ ಸರ್ವೆ ಸಂಖ್ಯೆ ೪೪೧/೧ಬಿಪಿ೧ ರಲ್ಲಿ ಸರ್ಕಾರಿ ಜಮೀನಿನಲ್ಲಿ ದಲಿತ ಜನಾಂಗಕ್ಕೆ ಸೇರಿದ ಶ್ರೀಮತಿ ಪದ್ಮಬಾಯಿ ಎಂಬವರು ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ತಗಡಿನ ಗುಡಿಸಲು ಮನೆ ನಿರ್ಮಾಣ ಮಾಡಿಕೊಂಡಿದ್ದು ಈ ಪೈಕಿ ಕಂದಾಯ ಇಲಾಖೆ ದಿನಾಂಕ ೦೪/೦೪/೨೦೨೦ ನೇ ಸೋಮವಾರ ಜೆಸಿಬಿ ಮುಖಾಂತರ ಮನೆಯೊಳಗಿದ್ದ ದಿನಸಿ ಬಟ್ಟೆ ಸಾಮಾಗ್ರಿಗಳ ಸಹಿತವಾಗಿ ಅಕ್ರಮ ಮನೆಯನ್ನು ಕೆಡವಿ ಹಾಕಿದ್ದರಿ . ಈ ವಿಚಾರವನ್ನು ಖಂಡಿಸಿ ಇಂದು ಶಿರ್ವ ಗ್ರಾಮ ಪಂಚಾಯತ್ ಮುಂಭಾಗ ಮಾಜಿ ಸಚಿವ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆಯ ಮುಂದಾಲತ್ವದಲ್ಲಿ ಬಡ ಕುಟುಂಬಕ್ಕೆ ನ್ಯಾಯ ದೊರಕಬೇಕೆಂಬ ದೃಷ್ಟಿಯಿಂದ ಪ್ರತಿಭಟನೆ ನಡೆಸಿ ಪಿಡಿಓ ಮುಖಾಂತರ ಮನವಿ ಸಲ್ಲಿಸುವ ಸಮಯದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸೊರಕೆಯ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂಧರ್ಬದಲ್ಲಿ ಗುಂಪಾಗಿ ಸೇರಿದ್ದ ಪ್ರತಿಭಟನಕಾರರ ನೂಕಾಟ ತಲ್ಲಾಟದಲ್ಲಿ ಮಾಜಿ ಸಚಿವ ಸೊರಕೆಯ ಶರ್ಟ್ ಹರಿದ ಘಟನೆ ನಡೆದಿದೆ.
ಬಿಜೆಪಿ ಕಾರ್ಯಕರ್ತರ ಜೈ ಶ್ರೀರಾಮ್ ಘೋಷಣೆ
ಈ ಸುದ್ದಿ ಹರಿದಾಡುತ್ತಿದ್ದಂತೆ ಸ್ಥಳಕ್ಕೆ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು ಸೊರಕೆಯ ವಿರುದ್ದ ಹಾಗೂ ಕಾಂಗ್ರೇಸ್ ಪಕ್ಷದ ವಿರುದ್ಧ ಘೋಷಣೆ ಕೂಗಿದ್ದು ಮಾತ್ರವಲ್ಲದೆ ವಂದೇ ಮಾತರಂ ಹಾಗೂ ಜೈ ಶ್ರೀರಾಮ್ ಘೋಷಣೆ ಕೂಗಿದರು.
ನೋಟಿಸ್ ನೀಡಿದ ಎರಡೇ ದಿನ ಆಗಿತ್ತು.
ಈ ಪೈಕಿ ಅಕ್ರಮ ಜಾಗದಲ್ಲಿ ನಿರ್ಮಾಣವಾಗಿದ್ದ ಮನೆಯನ್ನು ತೆರವು ಮಾಡುವಂತೆ ದಲಿತ ಕುಟುಂಬಕ್ಕೆ ಎರಡು ದಿನ ಹಿಂದೆ ನೋಟಿಸ್ ನೀಡಲಾಗಿತ್ತು ಆದರೇ ಆ ಕುಟುಂಬ ೯೪ಸಿಸಿ ಅಡಿಯಲ್ಲಿ ಅರ್ಜಿ ನೀಡಿರುವುದರಿಂದ ಸುಮ್ಮನಾಗಿದ್ದರು.
ಪಿಡಿಓ ಸರ್ವಾಧಿಕಾರಿ ಧೋರಣೆಗೆ ಕೆಂಡಾಮಂಡಳವಾದ ಸೊರಕೆ
ಮನವಿ ಸಲ್ಲಿಸಲು ಪಂಚಾಯತ್ ಆಗಮಿಸಿದ ಕಾಂಗ್ರೇಸ್ ಕಾರ್ಯಕರ್ತರು ಹಾಗೂ ಸೊರಕೆ ಪಿಡಿಓ ಜತೆ ಒಂದಿಷ್ಟು ಪ್ರಶ್ನೆಗಳನ್ನುಮಾಡಿದ ಸಮಯದಲ್ಲಿ ಉಡಾಫೆ ಉತ್ತರ ಹಾಗೂ ಸರ್ವಾಧಿಕಾರಿ ಧೋರಣೆಯನ್ನು ತೋರ್ಪಡಿಸಿದ್ದರಿಂದ ಮಾಜಿ ಸಚಿವರು ಪಂಚಾಯತ್ ಅಭಿವೃದ್ದಿ ಅಧಿಕಾರಿಯ ವಿರುದ್ದ ಕೆಂಡಾಮಂಡಳವಾದರು.
ಸ್ಥಳಕ್ಕೆ ಭೇಟಿ ನೀಡಿದ ತಹಾಶಿಲ್ದರ್ ಕುಲಕರ್ಣಿ
ಘಟನಾ ಸ್ಥಳಕ್ಕೆ ಕಾಪು ತಾಲೂಕಿನ ತಹಾಶಿಲ್ದಾರ್ ಶ್ರೀನಿವಾಸ ಕುಲಕರ್ಣಿ ಭೇಟಿ ನೀಡಿ ವಿನಯ್ ಕುಮಾರ್ ಸೊರಕೆಯ ಮನವೊಲಿಸಲು ಪ್ರಯತ್ನಿಸಿ ಮನೆ ಕಳೆದುಕೊಂಡ ದಲಿತ ಕುಟುಂಬಕ್ಕೆ ಶೀಘ್ರವಾಗಿ ನ್ಯಾಯ ಒದಗಿಸುವ ಬಗ್ಗೆ ಮಾಹಿತಿ ನೀಡಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…