ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಗುರುವಾರ ಸಮನ್ಸ್ ಜಾರಿಗೊಳಿಸಿದೆ.
2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲಗೆ ವಡೇರಹಳ್ಳಿಯ 2 ಎಕರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ 2012ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು. ಬನಶಂಕರಿ ಐದನೇ ಹಂತದಲ್ಲಿರುವ ಹಲಗೆ ವಡೇರಹಳ್ಳಿಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಚಾಮರಾಜನಗರದ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವವರು ದೂರು ಸಲ್ಲಿಸಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2019ರ ಆರಂಭದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಆ ಮೂಲಕ ಕುಮಾರಸ್ವಾಮಿ ಅವರಿಗೆ ರಿಲೀಫ್ ಸಿಕ್ಕಿತ್ತು. ಆದರೆ ಮಹದೇವಸ್ವಾಮಿ ಬಿ ರಿಪೋರ್ಟ್ ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. 2012ರಲ್ಲಿ ಪ್ರಕರಣ ದಾಖಲಾಗಿದ್ದರೂ ಕ್ರಮ ಕೈಗೊಳ್ಳದೇ, ಈಗ ಇದ್ದಕ್ಕಿದ್ದಂತೆ ಬಿ ರಿಪೋರ್ಟ್ ಸಲ್ಲಿಸಿರುವ ಬಗ್ಗೆ ನ್ಯಾಯಾಧೀಶರು ಸಿಟ್ಟಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಆದೇಶಿಸಿದ್ದರು. ಇದೀಗ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…