Featured

ಅಕ್ರಮ ಡಿನೋಟಿಫಿಕೇಷನ್​ ಪ್ರಕರಣ : ಎಚ್​ ಡಿ ಕುಮಾರಸ್ವಾಮಿ ವಿರುದ್ಧ ಕೋರ್ಟ್ ಸಮನ್ಸ್ ಜಾರಿ -Vishwanews24

ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್​ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್​ ಡಿ ಕುಮಾರಸ್ವಾಮಿ ವಿರುದ್ಧ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್​ 4ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಗುರುವಾರ ಸಮನ್ಸ್​ ಜಾರಿಗೊಳಿಸಿದೆ.

2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲಗೆ ವಡೇರಹಳ್ಳಿಯ 2 ಎಕರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್​ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ 2012ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು. ಬನಶಂಕರಿ ಐದನೇ ಹಂತದಲ್ಲಿರುವ ಹಲಗೆ ವಡೇರಹಳ್ಳಿಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್​ ಮಾಡಿದ್ದಾರೆ ಎಂದು ಚಾಮರಾಜನಗರದ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವವರು ದೂರು ಸಲ್ಲಿಸಿದ್ದರು.

ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2019ರ ಆರಂಭದಲ್ಲಿ ಬಿ ರಿಪೋರ್ಟ್​ ಸಲ್ಲಿಸಿದ್ದರು. ಆ ಮೂಲಕ ಕುಮಾರಸ್ವಾಮಿ ಅವರಿಗೆ ರಿಲೀಫ್​ ಸಿಕ್ಕಿತ್ತು. ಆದರೆ ಮಹದೇವಸ್ವಾಮಿ ಬಿ ರಿಪೋರ್ಟ್​ ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. 2012ರಲ್ಲಿ ಪ್ರಕರಣ ದಾಖಲಾಗಿದ್ದರೂ ಕ್ರಮ ಕೈಗೊಳ್ಳದೇ, ಈಗ ಇದ್ದಕ್ಕಿದ್ದಂತೆ ಬಿ ರಿಪೋರ್ಟ್​ ಸಲ್ಲಿಸಿರುವ ಬಗ್ಗೆ ನ್ಯಾಯಾಧೀಶರು ಸಿಟ್ಟಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಆದೇಶಿಸಿದ್ದರು. ಇದೀಗ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್​ ಸಮನ್ಸ್​ ಜಾರಿಗೊಳಿಸಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago