ಅಕ್ಬರ್ನಗರ: ಕುಕ್ರೈಲ್ ನದಿಯ ತಳದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರದ (ಎಲ್ಡಿಎ) ಅಧಿಕಾರಿಗಳು ಹೇಳಿದ್ದಾರೆ. ಜೂನ್ 19ರಿಂದ ಪ್ರಾರಂಭವಾಗಿ ಇಂದು (ಜೂ.20) ಈ ಕಾರ್ಯಚರಣೆ ಕೊನೆಗೊಂಡಿದೆ.
ಬುಲ್ಡೋಜರ್ಗಳು ಸೇರಿದಂತೆ ಭಾರೀ ಯಂತ್ರೋಪಕರಣಗಳನ್ನು ಬಳಸಿ ಸುಮಾರು 1,169 ಅಕ್ರಮ ವಸತಿ ಆಸ್ತಿಗಳು ಮತ್ತು 100 ಕ್ಕೂ ಹೆಚ್ಚು ವಾಣಿಜ್ಯ ಆಸ್ತಿಗಳನ್ನು ನೆಲಸಮ ಮಾಡಲಾಗಿದೆ. ಇದರಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಮಸೀದಿಗಳನ್ನು ಕೂಡ ಕೆಡವಿದ್ದಾರೆ. 24.5 ಎಕರೆ ಜಾಗದಲ್ಲಿ ನಡೆದಿರುವ ಅಕ್ರಮ ಒತ್ತುವರಿ ತೆರವು ಕಾರ್ಯ ಕಳೆದ ವರ್ಷ ಡಿಸೆಂಬರ್ನಲ್ಲಿ ಆರಂಭವಾಗಿತ್ತು. ಈ ಪ್ರದೇಶದಲ್ಲಿ ಧಾರ್ಮಿಕ ಸ್ಥಳಗಳು ಸೇರಿದಂತೆ 1,320 ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ.
ಜೂನ್ 18 ರಂದು ಸುಮಾರು 100 ಕಟ್ಟಡಗಳನ್ನು ಕೆಡವಲಾಯಿತು. ಇದೀಗ ಅದರ ಅವಶೇಷಗಳನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿದೆ. ಇನ್ನು ಈ ತೆರವು ಕಾರ್ಯಚರಣೆಯಿಂದ ಮನೆ ಕಳೆದುಕೊಂಡಿರುವ ಬಡ ಜನರಿಗೆ ನಗರದ ಇತರ ಭಾಗದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಪರ್ಯಾಯ ವಸತಿ ಒದಗಿಸಲಾಗಿದೆ. ಅಕ್ಬರ್ನಗರದ 1,800ಕ್ಕೂ ಹೆಚ್ಚು ಕುಟುಂಬಗಳು ವಸತಿ ಸೌಲಭ್ಯ ಪಡೆದಿವೆ. ಈ ಪ್ರದೇಶದಲ್ಲಿ ಪರಿಸರ ಪ್ರವಾಸೋದ್ಯಮ ಕೇಂದ್ರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…