Featured

ಅಕ್ರಮ ಮುಚ್ಚಿಡಲೆಂದೇ ಇಂಧನ ಖಾತೆಗಾಗಿ ಪಟ್ಟು ಹಿಡಿದ ಡೀಕೇಶಿ ; ಶೋಭಾ ಕರಂದ್ಲಾಜೆ ಆರೋಪ

ಮಂಗಳೂರು : “ಕಾಂಗ್ರೆಸ್ ಸರ್ಕಾರದ ಸಂಪುಟದಲ್ಲಿ ಇಂಧನ ಸಚಿವರಾಗಿದ್ದಾಗ ನಡೆಸಿರುವ `ಅಕ್ರಮ’ ಮುಚ್ಚಿಡುವ ಒಂದೇ ಉದ್ದೇಶದಿಂದ ಮಾಜಿ ಇಂಧನ ಸಚಿವ ಡಿ ಕೆ ಶಿವಕುಮಾರ್ ಪ್ರಸಕ್ತ ಮೈತ್ರಿ ಸರ್ಕಾರದಲ್ಲೂ ಇಂಧನ ಖಾತೆಗೆ ಪಟ್ಟು ಹಿಡಿದಿದ್ದಾರೆ” ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಇಂಧನ ಖಾತೆ ಯಥೇಚ್ಛ ದುರುಪಯೋಗವಾಗಿದೆ ಎಂದು ಹಿಂದೊಮ್ಮೆ ಇಂಧನ ಸಚಿವರೂ ಆಗಿದ್ದ ಕರಂದ್ಲಾಜೆ ಆಪಾದಿಸಿದ್ದಾರೆ.

“ಡೀಕೇಶಿಯಿಂದ ಇಂಧನ ಖಾತೆಯ ದುರುಪಯೋಗವಾಗಿದೆ. ಈ ವಲಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಪರಿಮಿತ ಅಕ್ರಮಗಳು ನಡೆದಿವೆ. ಒಂದೊಮ್ಮೆ ಇಂಧನ ಖಾತೆ ಕೈತಪ್ಪಿದರೆ, ಇಲಾಖೆಯಲ್ಲಿ ನಡೆದಿರುವ ಅಕ್ರಮಗಳು ಒಂದೊಂದಾಗಿ ಮೇಲೆ ಬೀಳಬಹುದೆಂಬ ಭೀತಿಯಿಂದ ಅವರೀಗ ಮತ್ತೊಂದು ಅವಧಿಗೆ ಇಂಧನ ಖಾತೆಯ ಮೇಲೆ ಹಕ್ಕು ಸ್ಥಾಪಿಸಲು ಮುಂದಾಗಿದ್ದಾರೆ” ಎಂದು ಟೀಕಿಸಿದ್ದಾರೆ.

“ಸರ್ಕಾರ ರಚನೆಗೊಂಡು ಎರಡು ವಾರವಾದರೂ ಖಾತೆ ಹಂಚಿಕೆಗಾಗಿ ಹಗ್ಗಜಗ್ಗಾಟ ಮುಂದುವರಿದೆ. ಈ ಅವಧಿಯಲ್ಲಿ ಕಾಂಗ್ರೆಸ್ ಶಾಸಕರು ರಿಸಾರ್ಟ್ ರಾಜಕಾರಣ ಮತ್ತು ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಮಹತ್ತಾದ ಸಾಧನೆ ಮಾಡಿದ್ದಾರೆ” ಎಂದು ಕರಂದ್ಲಾಜೆ ಆರೋಪಿಸಿದ್ದಾರೆ.

ಧಾರಾಕಾರ ಮಳೆಯ ಬಳಿಕವೂ ಮಂಗಳೂರು, ಉಡುಪಿಯ ಜನರು ಎದುರಿಸುತ್ತಿರುವ ನೈಜ ಸಮಸ್ಯೆಗಳತ್ತ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಿಲ್ಲ ಎಂದವರು ಟೀಕಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago