Featured

ಅಕ್ರಮ ಸಂಬಂಧಕ್ಕೆ ತಾಯಿ ಬಲಿ : ಕತ್ತು ಹಿಸುಕಿ ಕೊಲೆ ಮಾಡಿದ ಮಗಳು – vishwanews24

ಅಕ್ರಮ ಸಂಬಂಧಕ್ಕೆ ತಾಯಿ ಬಲಿ : ಕತ್ತು ಹಿಸುಕಿ ಕೊಲೆ ಮಾಡಿದ ಮಗಳು

ಬೆಂಗಳೂರು : ತನ್ನ ಅಕ್ರಮ ಸಂಬಂಧ ನೋಡಿದ ತಾಯಿಯನ್ನು ಮಗಳು ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೊಂಗಸಂದ್ರದಲ್ಲಿ ನಡೆದಿದೆ.

ಮೃತರನ್ನು ಜಯಲಕ್ಷ್ಮಿ( 46) ಎಂದು ಗುರುತಿಸಲಾಗಿದೆ. ಆರೋಪಿ ಮಗಳು ಪವಿತ್ರಾ ಮತ್ತು ಆಕೆಯ ಪ್ರಿಯಕರ ಲವಣೇಶ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರಂಭದಲ್ಲಿ ಕೊಲೆಯನ್ನು ಅಪಘಾತ ಎಂದು ಬಂಬಿಸಲಾಗಿತ್ತು,. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ ಎಂಬುದು ಎಂದು ದೃಢಪಟ್ಟಿದೆ.

ಜಯಲಕ್ಷ್ಮಿ ಅವರ ಕಟ್ಟಡದಲ್ಲಿ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದ ಆರೋಪಿ ಹಾಗೂ ಅದೇ ಕಟ್ಟಡದಲ್ಲಿ ಬಾಡಿಗೆದಾರನಾಗಿದ್ದ ಲವಣೇಶ್ ಎಂಬುವರನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಪವಿತ್ರಾ 11 ವರ್ಷಗಳ ಹಿಂದೆ ಸುರೇಶ್ ಎಂಬಾತನನ್ನು ಮದುವೆಯಾಗಿದ್ದು, 10 ವರ್ಷದ ಮಗಳು ಮತ್ತು ಆರು ವರ್ಷದ ಮಗ ಇದ್ದಾನೆ. ಆದರೆ, ಇತ್ತೀಚೆಗಷ್ಟೇ ಲವಣೇಶ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದಕ್ಕೆ ತಾಯಿ ಒಪ್ಪಿರಲಿಲ್ಲ ಎನ್ನಲಾಗಿದೆ.

ಬುಧವಾರ ಮಧ್ಯಾಹ್ನ 3 ಗಂಟೆಗೆ ತನ್ನ ತಾಯಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಪವಿತ್ರಾ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿ ಮತ್ತು ಆಕೆಯ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸರು ಆರಂಭದಲ್ಲಿ ಅದನ್ನು ಅಸಹಜ ಸಾವು ಎಂದು ವರ್ಗೀಕರಿಸಿದ್ದರು. ಆದರೆ, ಶುಕ್ರವಾರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಜಯಲಕ್ಷ್ಮಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ದೃಢಪಟ್ಟಿದ್ದರಿಂದ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದೆ.

ಈ ವರದಿಯ ನಂತರ ಪೊಲೀಸರಿಗೆ ಪವಿತ್ರಾಳ ಮೇಲೆ ಅನುಮಾನ ಮೂಡಿದ್ದು, ವಿಚಾರಣೆ ನಡೆಸಿದಾಗ ಅಕ್ರಮ ಸಂಬಂಧದ ಬಗ್ಗೆ ತಾಯಿ ಪ್ರಶ್ನಿಸಿದಾಗ ಟವೆಲ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಪವಿತ್ರಾ ಮತ್ತು ಲವಣೇಶ್ ಇಬ್ಬರನ್ನೂ ಬಂಧಿಸಲಾಗಿದ್ದು, ಪೊಲೀಸ್ ವಶದಲ್ಲಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago