Featured

ಅಕ್ರಮ ಸಂಬಂಧಕ್ಕೆ ಮಗು ಅಡ್ಡಿ : ಪ್ರಿಯಕರನೊಂದಿಗೆ ಸೇರಿ  ಉಸಿರುಗಟ್ಟಿಸಿ ಕೊಂದ ತಾಯಿ – vishwanews24

ಅಕ್ರಮ ಸಂಬಂಧಕ್ಕೆ ಮಗು ಅಡ್ಡಿ : ಪ್ರಿಯಕರನೊಂದಿಗೆ ಸೇರಿ  ಉಸಿರುಗಟ್ಟಿಸಿ ಕೊಂದ ತಾಯಿ

ಹಾವೇರಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾಳೆಂದು ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೃತ ಮಗುವನ್ನು ಪ್ರಿಯಾಂಕಾ (4) ಎಂದು ಗುರುತಿಸಲಾಗಿದೆ. ರಾಣೇಬೆನ್ನೂರು ನಗರದ ಎಕೆಜಿ ಕಾಲನಿ ಗಂಗಮ್ಮ ಗುತ್ತಲ (36) ಹಾಗೂ ಗೌರಿಶಂಕರ ನಗರದ ಅಣ್ಣಪ್ಪ ಮಡಿವಾಳರ (40) ಕೊಲೆ ಮಾಡಿದ ಆರೋಪಿಗಳು ಎಂದು ಗುರುತಿಸಲಾಗಿದೆ.

ಆರೋಪಿಗಳಿಬ್ಬರು ಅನೈತಿಕ ಸಂಬಂಧ ಹೊಂದಿದ್ದರು. ಹೀಗಾಗಿ ಆರೋಪಿ ಗಂಗಮ್ಮ ಎರಡು ತಿಂಗಳ ಹಿಂದೆ ತನ್ನ ಪತಿಯನ್ನು ಬಿಟ್ಟು, ಮಗಳನ್ನು ಕರೆದುಕೊಂಡು ಅಣ್ಣಪ್ಪನ ಜೊತೆ ಗುಡ್ಡದ ಆನ್ವೇರಿ ಗ್ರಾಮದಲ್ಲಿ ವಾಸವಾಗಿದ್ದರು. ಆದರೆ ಈ ನಡುವೆ ತಮ್ಮ ಅಕ್ರಮ ಸಂಬಂಧಕ್ಕೆ ಮಗಳು ಅಡ್ಡಿಯಾಗುತ್ತಿದ್ದಾಳೆಂದು ಭಾವಿಸಿ, ಆಕೆಯ ಕೊಲೆಗೆ ಸಂಚು ರೂಪಿಸಿದ್ದರು. ಅದರಂತೆ ಆ.5ರಂದು ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಹಾವೇರಿ ತಾಲೂಕಿನ ಕುರಗುಂದ ಗ್ರಾಮದ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆ ಬಳಿ ಸುಟ್ಟು ಹಾಕಲು ಪ್ರಯತ್ನಿಸಿದ್ದರು. ನಂತರ ಬಾಲಕಿಯ ಅರ್ಧದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಗುತ್ತಲ ಠಾಣೆ ಪೊಲೀಸರು ಬಾಲಕಿಯನ್ನು ಅಪರಿಚಿತ ಶವ ಎಂದು ಪರಿಗಣಿಸಿ, ಅಂತ್ಯಸಂಸ್ಕಾರ ನೆರವೇರಿಸಿದ್ದರು.

ಇದೆಲ್ಲ ನಡೆದ ಸ್ವಲ್ಪ ದಿನಗಳ ಬಳಿಕ ಆರೋಪಿ ಗಂಗಮ್ಮಳ ಪತಿ ಮಂಜುನಾಥ ಮಗುವನ್ನು ನೀಡುವಂತೆ ಬೇಡಿಕೊಂಡಿದ್ದನು. ನೀನು ಅವನ ಜೊತೆಗೆ ಇರು, ಆದರೆ ನನ್ನ ಮಗಳನ್ನು ನನಗೆ ಕೊಟ್ಟುಬಿಡು ಎಂದು ಪಟ್ಟುಹಿಡಿದ್ದಿದ್ದ. ಆಗ ಗಂಗಮ್ಮ ಮಗಳು ಮೈಸೂರಿನಲ್ಲಿದ್ದಾಳೆ, ಅವಳಿಗೆ ಹುಷಾರಿಲ್ಲ, ಆಸ್ಪತ್ರೆಯಲ್ಲಿದ್ದಾಳೆ ಎಂದು ಕಥೆ ಕಟ್ಟಿ, ಒಂದು ತಿಂಗಳು ಕಾಲಕಳೆದಿದ್ದಳು.

ಇದರಿಂದ ಬೇಸತ್ತ ಪತಿ ಮಂಜುನಾಥ ಮಗಳನ್ನು ಕೊಡಿಸುವಂತೆ ಶಹರ ಠಾಣೆ ಪಿಎಸ್‌ಐ ಗಡ್ಡಪ್ಪ ಗುಂಜುಟಗಿ ಮೊರೆ ಹೋಗಿದ್ದಾನೆ. ಆಗ ಪಿಎಸ್‌ಐ ಮಗಳ ವಿಚಾರವಾದರೆ ಕೂಡಲೇ ಬಗೆಹರಿಸುವೆ ಎಂದು ಗಂಗಮ್ಮ ಮತ್ತು ಅಣ್ಣಪ್ಪನನ್ನು ಕರೆತಂದು ವಿಚಾರಿಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago