ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಪ್ರಕರಣವನ್ನು ಇಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು 120ಬಿ ಅಡಿ ಪ್ರಕರಣವನ್ನ ದಾಖಲಿಸಿತ್ತು. ಇಡಿ ದಾಖಲಿಸಿದ್ದ ಈ ಪ್ರಕರಣವನ್ನು ಇದೀಗ ಸುಪ್ರೀಂ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಈ ಮೂಲಕ ಡಿಕೆಶಿ ಅವರಿಗೆ ಇಡಿ ತನಿಖೆಯಿಂದ ಬಿಗ್ ರಿಲೀಫ್ ದೊರೆತಂತಾಗಿದೆ.
ಇನ್ನು ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ನಡೆಸಿದೆ. ವಿಚಾರಣೆ ನಡೆಸಿದ ಪೀಠವು ಈ ಪ್ರಕರಣ ಕ್ರಿಮಿನಲ್ ಪಿತೂರಿಯ ಭಾಗವಾಗಿಲ್ಲ. ಆದ್ದರಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಬರುವುದಿಲ್ಲ. ಹೈಕೋರ್ಟ್ ಆದೇಶವನ್ನು ರದ್ದು ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಪ್ರಕ್ರಿಯೆ ರದ್ದುಗೊಳಿಸಲಾಗಿದೆ ಎಂದು ಆದೇಶ ನೀಡಿದೆ.
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…
ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…