ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ 3 ನೇ ಆರೋಪಿ ಮಂಜುನಾಥ್ ಶೆಣೈ ಮತ್ತು 4 ನೇ ಆರೋಪಿ ಕೇಶವ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯವು ಇಬ್ಬರಿಗೂ ಜಾಮೀನು ನೀಡಿ ಆದೇಶಿಸಿದ್ದಾರೆ.
ಇದನ್ನೂ ಓದಿ:
ತಲಾ 1 ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಸಲ್ಲಿಸುವುದು, ಪ್ರಕರಣದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು ಅಥವಾ ಸಾಕ್ಷ್ಯ ನಾಶಕ್ಕೆ ಯತ್ನ ಮಾಡಬಾರದು. ವಿಚಾರಣಾ ಸಮಯದಲ್ಲಿ ತಪ್ಪದೇ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
ನವೆಂಬರ್ 6,2023 ರಂದು ಪುತ್ತೂರಿನ ನೆಹರು ನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಅಕ್ಷಯ್ ಕಲ್ಲೇಗ ಪರಿಚಿತರಿಂದಲೇ ಹತ್ಯೆಗೀಡಾಗಿದ್ದರು. ಈ ಪ್ರಕರಣ ಸಂಬಂಧ ಪಡೀಲು ನಿವಾಸಿ ಮನೀಶ್, ಕೃಷ್ಣನಗರದ ಚೇತನ್, ಬನ್ನೂರಿನ ಮಂಜುನಾಥ್ ಯಾನೆ ಹರಿ ಹಾಗೂ ಕೇಶವ ಪಡೀಲ್ ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದರು.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…