Featured

ಅಕ್ಷಯ್ ಕುಮಾರ್ ಜತೆ ಮೋದಿ ಮನ್ ಕಿ ಬಾತ್ : ನಾನು ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ಯಾವತ್ತೂ ನಿರೀಕ್ಷಿಸಿರಲಿಲ್ಲ – Vishwanews24

ನವದೆಹಲಿ, : “ನಾನು ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ಯಾವತ್ತೂ ನಿರೀಕ್ಷಿಸಿರಲಿಲ್ಲ. ಸನ್ಯಾಸಿಯಾಗಬೇಕು ಎಂದುಕೊಂಡಿದ್ದ ನನ್ನನ್ನು ಬದುಕೇ ಪ್ರಧಾನಿಯನ್ನಾಗಿ ಮಾಡಿತು. ಜೀವನ ತಾನಾಗೇ ರೂಪುಗೊಂಡಿತು, ಅದು ನಾನು ರೂಪಿಸಿದ್ದಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ಸಂದರ್ಶನದಲ್ಲಿ, ಮೋದಿ ಅವರು ತಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಬದುಕಿನ ಅನುಭವಗಳನ್ನು ಹಂಚಿಕೊಂಡರು. ಈ ಸಂದರ್ಶನ ಸಂಪೂರ್ಣ ರಾಜಕೀಯವನ್ನು ಹೊರತಾಗಿಸಿದ್ದಾಗಿದ್ದರಿಂದ ಮೋದಿ ಅವರ ಬದುಕಿನ ಬಗ್ಗೆ ಜನಸಾಮಾನ್ಯರಿಗೆ ಗೊತ್ತಿರದಿದ್ದ ಹಲವು ಕುತೂಹಲಕರ ವಿಷಯಗಳು ಹೊರಬಂದವು.

“ಚಿಕ್ಕ ವಯಸ್ಸಿನಿಂದಲೂ ನನಗೆ ಸೇನೆಯನ್ನು ಕಂಡರೆ ಗೌರವ. ನಂತರ ರಾಮಕೃಷ್ಣ ಮಿಶನ್ ಮತ್ತು ಅಲ್ಲಿನ ಅಧ್ಯಾತ್ಮ ಗುರುಗಳಿಂದ ಸ್ಫೂರ್ತಿ ಪಡೆದು ಅಧ್ಯಾತ್ಮದ ಕಡದೆ ಆಕರ್ಷಿತವಾದೆ. ಸನ್ಯಾಸಿಯಾಗಬೇಕು ಎಂದುಕೊಂದಿದ್ದ ನಾನು, ಎಂದೋ ಒಂದು ದಿನ ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ನಿರೀಕ್ಷಿಸಿಯೇ ಇರಲಿಲ್ಲ. ಆದರೆ ಬದುಕು ತಾನೇ ಹಾಗೆ ಆಕಾರಗೊಂಡು, ನನ್ನನ್ನು ಪ್ರಧಾನಿಯನ್ನಾಗಿ ಮಾಡಿತು”-

ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗುವವರೆಗೂ ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಯೇ ಇರಲಿಲ್ಲ! ಮುಖ್ಯಮಂತ್ರಿಯಾದ ನಂತರ ಖಾತೆ ತೆರೆಯ ಬೇಕಾದ ಅಗತ್ಯ ಬಂದಾಗ ಅವರು ಬ್ಯಾಂಕ್ ಖಾತೆ ತೆರೆದರು. ಅವರು ಪ್ರಧಾನಿಯಾದ ಬಳಿಕ ಅವರ ವೇತನದಿಂದ ಬಂದ 21 ಲಕ್ಷ ರೂ.ಗಳನ್ನು ಡ್ರೈವರ್ ಗಳ ಮಕ್ಕಳಿಗೆ ಮೋದಿ ನೀಡಿದ್ದರು.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago