ನವದೆಹಲಿ: ಅಖಿಲ್ ಭಾರತ ಕಾಂಗ್ರೆಸ್ ಯುವ ಘಟಕದ ಮಧ್ಯಂತರ ಅಧ್ಯಕ್ಷರನ್ನಾಗಿ ಕರ್ನಾಟಕದ ಮೂಲದ ಬಿ.ವಿ.ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ.
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕೇಶವ್ ಚಂದ್ ಆವರು 2019ರ ಲೋಕಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ಹುದ್ದೆ ತ್ಯಜಿಸಿದ್ದರು. ಯಾದವ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ವರ್ಷದ ಹಿಂದೆ ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದ ಶ್ರೀನಿವಾಸ್.ಬಿ.ವಿ. ಆಯ್ಕೆಯಾಗಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ಬಿ.ವಿ.ಶ್ರೀನಿವಾಸ್ ಅವರನ್ನು ಅಖಿಲ್ ಭಾರತ ಯುವ ಕಾಂಗ್ರೆಸ್ ಘಟಕದ ಮಧ್ಯಂತರ ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷರು ನೇಮಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಶ್ರೀನಿವಾಸ್ ಅವರು, ಪಕ್ಷ ನೀಡಿದ ಹಲವು ಗುರುತರ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಗುಜರಾತ್, ಉತ್ತರಪ್ರದೇಶ, ತೆಲಂಗಾಣ ಉಸ್ತುವಾರಿಯನ್ನು ವಯಿಸಿದ್ದರು. ಗುಜರಾತ್ ವಿಧಾನಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರ ಮೆಚ್ಚುಗೆಗೆ ಪಾತ್ರವಾಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…