Featured

ಅಗತ್ಯ ಬಂದಲ್ಲಿ ಉತ್ತರ ಪ್ರದೇಶ ಮಾದರಿಯಲ್ಲೇ ರಾಜ್ಯದಲ್ಲಿ ಕ್ರಮ ಜಾರಿಗೊಳಿಸಲಾಗುವುದು : ಸಿಎಂ ಬೊಮ್ಮಾಯಿ – Vishwanews24

ಅಗತ್ಯ ಬಂದಲ್ಲಿ ಉತ್ತರ ಪ್ರದೇಶ ಮಾದರಿಯಲ್ಲೇ ರಾಜ್ಯದಲ್ಲಿ ಕ್ರಮ ಜಾರಿಗೊಳಿಸಲಾಗುವುದು : ಸಿಎಂ ಬೊಮ್ಮಾಯಿ

ಬೆಂಗಳೂರು: ಉತ್ತರ ಪ್ರದೇಶದಲ್ಲಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಲ್ಲಿನ ಮುಖ್ಯಮಂತ್ರಿಗಳು ಸರಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಆದರೆ ಅದನ್ನು ಕರ್ನಾಟಕಕ್ಕೆ ಹೋಲಿಕೆ ಮಾಡಲಾಗುವುದಿಲ್ಲ. ಅಂತಹ ಪ್ರಸಂಗ ಬಂದಲ್ಲಿ ಉತ್ತರ ಪ್ರದೇಶ ಮಾದರಿಯಲ್ಲೇ ರಾಜ್ಯದಲ್ಲಿ ಕ್ರಮ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು ಕರ್ನಾಟಕಕ್ಕೆ ಯೋಗಿ ಮಾದರಿಯ ಸಿಎಂ ಬೇಕೆಂಬ ಕಾರ್ಯಕರ್ತರ ಬೇಡಿಕೆ ಕುರಿತ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಕೆಲವು ಶಕ್ತಿಗಳು ದುರ್ಘಟನೆಗಳನ್ನು ಸೃಷ್ಟಿ ಮಾಡಲೆಂದೇ ಇರುತ್ತಾರೆ. ಹಿಜಾಬ್ ವಿಚಾರದಲ್ಲಿ ಐವರಿಂದ ಶುರುವಾದ ವಿವಾದ ಇಡೀ ರಾಜ್ಯಕ್ಕೆ ಹಬ್ಬಿ ಬಳಿಕ ಕಾನೂನಿನ ಮುಖಾಂತರ ತಿಳಿ ಹೇಳಿದ ನಂತರ ಸದ್ಯ ಎಲ್ಲರೂ ಕಾನೂನು ಪಾಲಿಸುತ್ತಿದ್ದಾರೆ. ಆಝಾನ್ ವಿಚಾರದಲ್ಲಿಯೂ ಇದೇ ಆಗಿದೆ ಎಂದರು.

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರ ಐದು ತಂಡಗಳನ್ನು ಮಾಡಲಾಗಿದೆ. ಕೇರಳಕ್ಕೆ ಪೊಲೀಸರ ತಂಡವನ್ನು ಕಳುಹಿಸಲಾಗಿದೆ. ಕಾನೂನು ಸುವ್ಯವಸ್ಥೆಯಲ್ಲಿ ಯಾವುದೇ ರಾಜಿ ಮಾಡುವುದಿಲ್ಲ. ದುಷ್ಟಶಕ್ತಿಗಳ ವಿರುದ್ದ ಹೋರಾಡುವುದಕ್ಕೆ ಸರ್ಕಾರ ಸದಾ ಬದ್ದ ಎಂದು ಅವರು ತಿಳಿಸಿದರು.

ಕಠಿಣ ಕ್ರಮದ ಸರ್ಕಾರ ಎಂದು ಪಕ್ಷದ ಕಾರ್ಯಕರ್ತರೇ ಲೇವಡಿ ಮಾಡುತ್ತಿರುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಹರ್ಷ ಕೊಲೆ ವಿಚಾರದಲ್ಲಿ 24 ಗಂಟೆಯೊಳಗೆ ಆರೋಪಿಗಳ ಬಂಧನವಾಗಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆಯಾದಾಗಲೂ ಕ್ರಮ ಕ್ಷಿಪ್ರವಾಗಿ ಆಗಿದೆ. ಪಾಂಡವಪುರ ಘಟನೆ ವೇಳೆ ಖುದ್ದಾಗಿ ನಾನೇ ಹೋಗಿ ಕ್ರಮಕ್ಕೆ ವ್ಯವಸ್ಥೆ ಮಾಡಿದ್ದೇನೆ. ರಾಜ್ಯದಲ್ಲಿ ದುಷ್ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಭಯೋತ್ಪಾದಕರನ್ನು ತಿಹಾರ್ ಜೈಲಿಗೆ ಕಳುಹಿಸುವ ಕೆಲಸ ನಿರಂತರ ನಡೆಯುತ್ತಿದೆ ಎಂದರು.

ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸುವುದು ಕೇಂದ್ರ ಸರ್ಕಾರದ ಕೆಲಸ. ಈ ಸಂಬಂಧ ನಾವು ನೀಡಬೇಕಾದ ಎಲ್ಲಾ ವರದಿಗಳನ್ನು ಕೇಂದ್ರಕ್ಕೆ ನೀಡಿದ್ದೇವೆ. ಶೀಘ್ರ ಕೇಂದ್ರದ ನಿರ್ಣಯ ಹೊರ ಬೀಳಬಹುದು ಎಂದು ಪ್ರಶ್ನೆಯೊಂದಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

10 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

10 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

10 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

11 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

11 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago