‘ಅಗತ್ಯ ಬಿದ್ದರೆ 50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಗುರುತಿಸಿ ದೇಶದಿಂದ ಓಡಿಸಲಾಗುವುದು – ದಿಲೀಪ್‌ ಘೋಷ್‌ -Vishwanews24

ಕೋಲ್ಕತಾ: “50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಗುರುತಿಸಿ ಅಗತ್ಯ ಬಿದ್ದರೆ ದೇಶದಿಂದ ಓಡಿಸಲಾಗುವುದು” ಎಂದು ಖರಗ್‌ಪುರದ ಸಂಸದ ದಿಲೀಪ್‌ ಘೋಷ್‌ ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯಿದೆ ಪರವಾಗಿ ಉತ್ತರ 24 ಪರಗಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, “50 ಲಕ್ಷ ಮುಸ್ಲಿಂ ಒಳನುಸುಳುಕೋರರನ್ನು ಗುರುತಿಸಲಾಗುವುದು, ಅಗತ್ಯ ಬಿದ್ದರೆ ಅವರನ್ನೆಲ್ಲ ಭಾರತದಿಂದ ಓಡಿಸಲಾಗುವುದು. ಮೊದಲಿಗೆ ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗುವುದು ಬಳಿಕ ಯಾರೊಬ್ಬರನ್ನು ದೀದಿಗೆ ಸಮಾಧಾನ ಪಡಿಸಲು ಆಗುವುದಿಲ್ಲ” ಎಂದು ಹೇಳಿದರು.

“ಅವರು ನಾಶಪಡಿಸುತ್ತಿರುವ ಸಾರ್ವಜನಿಕ ಆಸ್ತಿ ಅವರ ಅಪ್ಪನಿಗೆ ಸೇರಿದೆ ಎಂದು ಅವರು ತಿಳಿದಿದ್ದಾರ. ಸಾರ್ವಜನಿಕ ಆಸ್ತಿಯು ತೆರಿಗೆದಾರರಿಗೆ ಸೇರಿದ್ದು. ಈ ವಿಚಾರವಾಗಿ ಮಮತಾ ಅವರು ಏನನ್ನೂ ಹೇಳಲಿಲ್ಲ. ಏಕೆಂದರೆ ಅವರು ಅವರ ಮತದಾರರು. ಅಸ್ಸಾಂ ಹಾಗೂ ಉತ್ತರಪ್ರದೇಶದಲ್ಲಿ ನಮ್ಮ ಸರ್ಕಾರ ಇಂತಹವರನ್ನು ನಾಯಿಗಳಂತೆ ಹೊಡೆದುರುಳಿಸಿದೆ. ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಪ್ರತಿಭಟನೆ ವೇಳೆ ಉತ್ತರ ಪ್ರದೇಶ, ಅಸ್ಸಾಂ ಮತ್ತು ಕರ್ನಾಟಕ ಸರ್ಕಾರಗಳು ಇಂತಹ ರಾಷ್ಟ್ರ ವಿರೋಧಿಗಳ ಮೇಲೆ ಗುಂಡು ಹಾರಿಸುವ ಮೂಲಕ ಸರಿಯಾದ ಕಾರ್ಯವನ್ನೇ ಮಾಡಿವೆ “ಎಂದರು.

“ಸಾರ್ವಜನಿಕ ಆಸ್ತಿಗಳನ್ನು ಯಾರು ಧ್ವಂಸ ಮಾಡುತ್ತಾರೋ ಅಂತವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ನಾನು ಭಾಷಣದಲ್ಲಿ ಹೇಳಿದ್ದೆ. ವಿರೋಧ ಪಕ್ಷಗಳು ಈ ಬಗ್ಗೆ ಸಾಕಷ್ಟು ಗೊಂದಲಗಳನ್ನು ಸೃಷ್ಟಿ ಮಾಡಿದ್ದಾರೆ. ನಾನು ಈಗಲೂ ಅದನ್ನೇ ಹೇಳುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಧ್ವಂಸ ಮಾಡುವವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದರು.

“ಸಾರ್ವಜನಿಕ ಆಸ್ತಿಯನ್ನು ಧ್ವಂಸ ಮಾಡುವ ಈ ಒಳನುಸುಳುಕೋರರನ್ನು ಏನು ಮಾಡಬೇಕು? ಅವರಿಗೆ ಪ್ರಸಾದ ನೀಡಬೇಕೇ? ಸಾರ್ವಜನಿಕ ಆಸ್ತಿಯನ್ನು ಧ್ವಂಸ ಮಾಡಿದವರನ್ನು ಗುರುತಿಸಲಾಗುತ್ತದೆ. ಮೊದಲು ಅವರಿಗೆ ಗುಂಡಿಕ್ಕಿ ಬಳಿಕ ಬಾಂಬ್‌ ಸ್ಫೋಟಿಸಲಾಗುತ್ತದೆ. ಯಾರನ್ನೂ ಬಿಡಲಾಗುವುದಿಲ್ಲ” ಎಂದು ಹೇಳಿದರು.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago