ಬೆಂಗಳೂರು: ದೇಶಾದ್ಯಂತ ತೈಲಬೆಲೆ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ, ಇಂದು ಕೆಪಿಸಿಸಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಸಣ್ಣ ಗ್ಯಾಸ್ ಸಿಲಿಂಡರ್ ತಲೆ ಮೇಲೆ ಹೊತ್ತು, ಪ್ರತಿಭಟನೆ ನಡೆಸಿ ಗಮನ ಸೆಳೆಯದರು.
ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ ಆರಂಭಗೊಂಡಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಕಾಂಗ್ರೆಸ್ ನಾಯಕರು, ಸಿಲಿಂಡರ್ ಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಎಐಸಿಸಿಯಿಂದ ಬೆಲೆ ಏರಿಕೆ ಮುಕ್ತ ಅಭಿಯಾನಕ್ಕೆ ಚಾಲನೆಗೆ, ಕರ್ನಾಟಕದಲ್ಲೂ ಅಭಿಯಾನ ಶುರುವಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಬೈಕ್ ಮೇಲೆ ಮೋದಿ ಕುಳಿತಿರುವ ಪ್ರತಿಕೃತಿಗೆ ಗಂಟೆ ಬಡಿದು ಪೂಜೆ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬೈಕ್ ಮೇಲೆ ಮೋದಿ ಮುಖವಾಡ ಧರಿಸಿ ಕುಳಿತಿರುವ ವ್ಯಕ್ತಿಯ ಬೆನ್ನು ತಟ್ಟಿದ್ದು ಗಮನ ಸೆಳೆಯಿತು. ಅಲ್ಲದೇ ತಲೆ ಮೇಲೆ ಸಣ್ಣ ಸಿಲಿಂಡರ್ ಹೊತ್ತು ಫೋಸ್ ಕೊಟ್ಟಿದ್ದು ಕಂಡು ಬಂತು.
ಈ ವೇಳೆ ಮಾತನಾಡಿದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಗಗನಕ್ಕೆ ಹೋಗಿದೆ. ಆದಾಯ ಪಾತಾಳಕ್ಕೆ ಇಳಿದಿದೆ. ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ. ದಿನಾ ಪಿಕ್ ಪಾಕೆಟ್ ಆಗ್ತಿದೆ. ಗ್ಯಾಸ್ ಸಿಲಿಂಡರ್, ಬೈಕ್, ಕಾರಿಗೆ ಹಾರ ಹಾಕಿ ಪೂಜೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ದೇವೆ ಎಂದರು.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…