Featured

ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು ? ಯಾರನ್ನು ಕೇಳಿ ಜಾರಿ ಮಾಡುತ್ತಿದ್ದೀರಿ? : ಕುಮಾರಸ್ವಾಮಿ – Vishwanews24

ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು ? ಯಾರನ್ನು ಕೇಳಿ ಜಾರಿ ಮಾಡುತ್ತಿದ್ದೀರಿ? : ಕುಮಾರಸ್ವಾಮಿ – Vishwanews24

ಹಾಸನ: ದೇಶದ ಯುವಜನರ ವಿರೋಧದ ನಡುವೆಯೂ ಹಠಕ್ಕೆ ಬಿದ್ದು ಅಗ್ನಿಪಥ್ ಯೋಜನೆಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅತೃಪ್ತ ವ್ಯಕ್ತಪಡಿಸಿದರು.

ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈಗಿರುವ ಹಳೆಯ ವ್ಯವಸ್ಥೆಯಲ್ಲಿ ಇಲ್ಲಿಯವರೆಗೂ ದೇಶದ ರಕ್ಷಣೆ ಮಾಡಲಿಲ್ಲವೆ? ಅಗ್ನಿಪಥ್ ಯೋಜನೆ ಯಾರು ತರಲು ಹೇಳಿದರು. ಇವರಿಗೆ, ಯಾವ ಉದ್ದೇಶದಿಂದ ತರುತ್ತಿದ್ದೀರಿ ಎಂದು ಅವರು ಪ್ರಶ್ನಿಸಿದರು.

ಯಾರನ್ನು ಕೇಳಿ ಅಗ್ನಿಪಥವನ್ನು ಜಾರಿ ಮಾಡುತ್ತಿದ್ದೀರಿ? ರಕ್ಷಣೆಗೆ ಸಂಬಂಧಿಸಿದ ಸಂಸದೀಯ ಸಮಿತಿ ಶಿಫಾರಸು ಮಾಡಿತ್ತಾ? ಅಥವಾ ಈ ಯೋಜನೆಯನ್ನು ಜಾರಿಗೆ ತನ್ನಿ ಎಂದು ಸೇನೆ ಏನಾದರೂ ಶಿಫಾರಸು ಮಾಡಿತ್ತಾ? ಈ ಬಗ್ಗೆ ಕೇಂದ್ರ ಸರಕಾರ ದೇಶಕ್ಕೆ ಉತ್ತರ ನೀಡಬೇಕಿದೆ ಎಂದು ಅವರು ಆಗ್ರಹಪಡಿಸಿದರು.

ಯಾವ ಉದ್ದೇಶದಿಂದ ಏಕಾಏಕಿ ಹತ್ತು ಲಕ್ಷ ಜನ ಯುವಕರಿಗೆ ಕೆಲಸ ಕೊಡುತ್ತಿದ್ದೀರಿ? ಕ್ಷೌರದ ಶಾಪ್ ತೆರೆಯಲು ಮಿಲಿಟರಿಗೆ ಇವರನ್ನು ತೆಗೆದುಕೊಳ್ಳುತ್ತಾರೆ ಎಂದು ಕೆಲ ಬಿಜೆಪಿ ನಾಯಕರೇ ಹೇಳಿದ್ದಾರೆ. ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಅಲ್ಲಿಗೆ ಕರೆದುಕೊಂಡು ಹೋಗಿ ಟ್ರೈನಿಂಗ್ ಕೊಡಬೇಕಾ? ಕ್ಷೌರದ ಅಂಗಡಿ ಇಟ್ಟುಕೊಳ್ಳಲು ಅಗ್ನಿವೀರರು ಅಂತ ಸರ್ಟಿಫಿಕೇಟ್ ಕೊಡಬೇಕಾ? ಅಗ್ನಿಪಥ ಎನ್ನುವುದು ಆರ್‌ಎಸ್‌ಎಸ್ ಐಡಿಯಾ. ಅವರ ಚಟುವಟಿಕೆಗಳನ್ನು ಸೇನೆಯೊಳಕ್ಕೆ ನುಸುಳುವಂತೆ ಮಾಡಲು ಅಗ್ನಿಪಥ್ ಜಾರಿಗೆ ತರಲಾಗುತ್ತಿದೆ. ಹಿಂದೆ ಹಿಟ್ಲರ್ ಕಾಲದಲ್ಲಿ ಇದ್ದ ನಾಜಿ ಪಡೆಯನ್ನು ಭಾರತದಲ್ಲಿ ಈಗ ತರುವಂತಹ ಒಂದು ಪ್ರಾಯೋಗಿಕವಾದ ಕಾರ್ಯಕ್ರಮ ಇದಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

22 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

23 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

23 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

23 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

23 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago