Featured

ಅಗ್ನಿಪಥ್ ಯೋಜನೆ : ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಬಿಜೆಪಿ ಯ ನಾಟಕದ ಒಂದು ಭಾಗ : ಕೇಂದ್ರ ಸರ್ಕಾರದ ವಿರುದ್ದ ದಿನೇಶ್ ಗುಂಡುರಾವ್ – Vishwanews24

ಅಗ್ನಿಪಥ್ ಯೋಜನೆ : ಸೇನಾ ನೇಮಕಾತಿ ಅಲ್ಪಾವಧಿ , ರಾಜಕೀಯ ಲಾಭಕ್ಕೆ ಯೋಧರ ತ್ಯಾಗ ದುರ್ಬಳಕೆ..

ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ..

ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳು ಸೈನ್ಯ ಸೇರುವುದಿಲ್ಲ

ಮೋದಿಯವರ ನಾಟಕ ನಂಬಲು ಯುವಕರು ಮೂರ್ಖರಲ್ಲ..

ಬೆಂಗಳೂರು: ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುತಿದ್ದು ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ ಎಂದು ದಿನೇಶ್ ಗುಂಡುರಾವ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸೇನೆಯ ಅಲ್ಪಾವಧಿ ನೇಮಕ ಯೋಜನೆ ‘ಅಗ್ನಿಪಥ್’ ವಿರುದ್ಧ ದೇಶಾದ್ಯಂತ ಯುವಕರ ಆಕ್ರೋಶ ಭುಗಿಲೆದ್ದಿದೆ. ಯುವಕರ ಆಕ್ರೋಶ ಸಹಜವಾದದ್ದೆ.ಕಳೆದ ಎರಡು ವರ್ಷಗಳಿಂದ ಸೇನೆಗೆ ನೇಮಕಾತಿ ನಡೆದಿಲ್ಲ. ಈಗ ಅಗ್ನಿಪಥ್ ಯೋಜನೆಯ ಮೂಲಕ ನೇಮಕಾತಿಯಾದರೂ ಅದು ಅಲ್ಪಾವಧಿಯಷ್ಟೆ.‌ಕೇವಲ ನಾಲ್ಕು ವರ್ಷಕ್ಕೆ ಕಡ್ಡಾಯ ನಿವೃತ್ತಿಯಾಗಬೇಕು. ಆ ನಂತರ ಯುವಕರ ಭವಿಷ್ಯವೇನು ಎಂದು ಪ್ರಶ್ನಿಸಿದ್ದಾರೆ

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವುದೇ ಬಡ ಮಧ್ಯಮ ವರ್ಗದ ಯುವಕರು.ಹೊಟ್ಟೆ ತುಂಬಿದ ಶ್ರೀಮಂತರ ಮಕ್ಕಳಾಗಲಿ, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳಾಗಲಿ ಸೈನ್ಯ ಸೇರುವುದಿಲ್ಲ.ಇದು ಕಟು ವಾಸ್ತವ. ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ. ಇದನ್ನು ಕೇಂದ್ರ ಅರಿಯಬೇಕು. ಸೈನಿಕರ ಪಿಂಚಣಿ‌ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ಅಗ್ನಿಪಥ್ ಯೋಜನೆ ಜಾರಿಗೆ ಮುಂದಾಗಿದೆ. ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಸೈನಿಕರಿಗೆ ಪಿಂಚಣಿ ಕೊಡದಷ್ಟು ನಮ್ಮ ದೇಶ ನಿರ್ಗತಿಕವೇ? ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುವ ಮೋದಿಯವರಿಗೆ, ಸೈನಿಕರಿಗೆ ಪಿಂಚಣಿ ಕೊಡುವುದು ಬೇಕಿಲ್ಲವೆ ಎಂದು ಕೇಳಿದ್ದಾರೆ.

ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಮೋದಿ ಮಾತು ತಪ್ಪಿದ್ದಾರೆ.‌ಈಗ ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ. ಆದರೆ ಮೋದಿಯವರ ಈ ನಾಟಕ ನಂಬಲು ಯುವಕರು ಮೂರ್ಖರಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

5 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

5 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

5 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

5 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

7 hours ago