ನವದೆಹಲಿ: ಅಗ್ನಿಪಥ ಯೋಜನೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಭಾರತೀಯ ಸೇನೆಯು ಅಗ್ನಿಪಥ ಮಿಲಿಟರಿ ನೇಮಕಾತಿ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಎಲ್ಲ ಉದ್ಯೋಗಾಕಾಂಕ್ಷಿಗಳು ಸೇನೆಯ ನೇಮಕಾತಿ ಜಾಲತಾಣದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಸೇನೆ ತಿಳಿಸಿದೆ.
ಜುಲೈನಿಂದ ನೋಂದಣಿ ಆರಂಭವಾಗಲಿದೆ ಎಂದು ಅದು ಹೇಳಿದೆ.
ಭಾರತೀಯ ಸೇನೆಯಲ್ಲಿ ‘ಅಗ್ನಿವೀರ’ರದ್ದು ಒಂದು ವಿಶಿಷ್ಟ ಶ್ರೇಣಿಯಾಗಿದ್ದು, ಅಸ್ತಿತ್ವದಲ್ಲಿರುವ ಯಾವುದೇ ಶ್ರೇಣಿಗಳಿಗಿಂತ ಭಿನ್ನವಾಗಿರುತ್ತದೆ ಎಂದು ಸೇನೆ ಹೇಳಿದೆ.
ಸೇನೆಯು ಕಳೆದ ರಾತ್ರಿ ಬಿಡುಗಡೆ ಮಾಡಿರುವ ಈ ಯೋಜನೆಯ ವಿವರವಾದ ಟಿಪ್ಪಣಿಯಲ್ಲಿ ‘ಅಗ್ನಿವೀರ’ರು ನಾಲ್ಕು ವರ್ಷಗಳ ಸೇವಾ ಅವಧಿಯಲ್ಲಿ ಗಳಿಸಿದ ವರ್ಗೀಕೃತ ಮಾಹಿತಿ ಅಥವಾ ಮೂಲವನ್ನು ಯಾವುದೇ ಅನಧಿಕೃತ ವ್ಯಕ್ತಿಗೆ ಬಹಿರಂಗಪಡಿಸುವುದನ್ನು ಅಧಿಕೃತ ರಹಸ್ಯ ಕಾಯಿದೆ, 1923 ರ ಅಡಿಯಲ್ಲಿ ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.
‘ಈ ಯೋಜನೆಯ ಜಾರಿಯೊಂದಿಗೆ, ವೈದ್ಯಕೀಯ ಶಾಖೆಯ ತಾಂತ್ರಿಕ ವರ್ಗಗಳನ್ನು ಹೊರತುಪಡಿಸಿ ಭಾರತೀಯ ಸೇನೆಯ ಸಾಮಾನ್ಯ ಕೇಡರ್‌ನಲ್ಲಿ ಯೋಧರ ದಾಖಲಾತಿಗೆ ಅಗ್ನಿವೀರರಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಸಿಬ್ಬಂದಿಯನ್ನು ಮಾತ್ರ ಪರಿಗಣಿಸಲಾಗುತ್ತದೆ’ಎಂದು ಅದು ಹೇಳಿದೆ.
ಇದೇವೇಳೆ, ನಿಗದಿತ ಅವಧಿಗಿಂತ ಮೊದಲು ಅಗ್ನಿವೀರರನ್ನು ಅವರ ಮನವಿ ಮೇರೆಗೆ ಸೇವೆಯಿಂದ ಬಿಡುಗಡೆ ಮಾಡುವ ಅವಕಾಶ ಇಲ್ಲ ಎಂದು ಅದು ಹೇಳಿದೆ.
‘ಆದರೂ ವಿಶೇಷ ಸಂದರ್ಭಗಳಲ್ಲಿ, ಈ ಯೋಜನೆಯಡಿಯಲ್ಲಿ ದಾಖಲಾಗಿರುವ ಸಿಬ್ಬಂದಿಯನ್ನು ಸಕ್ಷಮ ಪ್ರಾಧಿಕಾರವು ಮಂಜೂರು ಮಾಡಿದರೆ ಸೇವೆಯಿಂದ ಬಿಡುಗಡೆ ಮಾಡಬಹುದು’ಎಂದು ಅದು ಹೇಳಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…