ನವದೆಹಲಿ,: ಭಾರತೀಯ ವಾಯುಪಡೆಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಅಗ್ನಿಪಥ್ ಯೋಜನೆಯ ಮೊದಲ ಬ್ಯಾಚ್ ನ ಅಗ್ನಿವೀರರ ನೇಮಕಾತಿಗಾಗಿ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.
ಅಭ್ಯರ್ಥಿಗಳು agnipathvayu.cdac.in ಅಧಿಕೃತ ವೆಬ್‌ಸೈಟ್ ನಲ್ಲಿ ಆನ್‌ಲೈನ್‌ನಲ್ಲಿ ನೇಮಕಾತಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ನೋಂದಣಿ ಬೆಳಿಗ್ಗೆ 10 ರಿಂದ ಪ್ರಾರಂಭವಾಗಲಿದ್ದು, ಪ್ರವೇಶದ ಪ್ರಕ್ರಿಯೆ, ಪ್ರವೇಶ ಮಟ್ಟದ ಅರ್ಹತೆ ಮತ್ತು ಪರೀಕ್ಷೆಯ ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ. ವಾಯುಪಡೆಯ ಎಲ್ಲಾ ದಾಖಲಾತಿಗಳು ಅಗ್ನಿವೀರ್ ವಾಯು ಮೂಲಕ ಮಾತ್ರ ನಡೆಯುತ್ತವೆ.
ಇನ್ನು ಆನ್‌ಲೈನ್ ಪರೀಕ್ಷೆಯನ್ನು ಜುಲೈ 24 ರಿಂದ ಜುಲೈ 31 ರವರೆಗೆ ದೇಶಾದ್ಯಂತ 250 ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಈ ವರ್ಷದ ಅಂತ್ಯದೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಂದಿನ ತಿಂಗಳ 1 ರಿಂದ ಸೇನೆ ಮತ್ತು ನೌಕಾಪಡೆ ನೋಂದಣಿ ಪ್ರಕ್ರಿಯೆ ಆರಂಭಿಸಲಿದೆ ಎಂದು ಭಾರತೀಯ ವಾಯುಪಡೆ ಮಾಹಿತಿ ನೀಡಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…