Featured

ಅಗ್ನಿವೀರರ ನೇಮಕಾತಿಗಾಗಿ ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭ – Vishwanews24

ಅಗ್ನಿವೀರರ ನೇಮಕಾತಿಗಾಗಿ ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭ – Vishwanews24

ನವದೆಹಲಿ,: ಭಾರತೀಯ ವಾಯುಪಡೆಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಅಗ್ನಿಪಥ್ ಯೋಜನೆಯ ಮೊದಲ ಬ್ಯಾಚ್‌ ನ ಅಗ್ನಿವೀರರ ನೇಮಕಾತಿಗಾಗಿ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ.

ಅಭ್ಯರ್ಥಿಗಳು agnipathvayu.cdac.in ಅಧಿಕೃತ ವೆಬ್‌‌ಸೈಟ್‌ ನಲ್ಲಿ ಆನ್‌ಲೈನ್‌ನಲ್ಲಿ ನೇಮಕಾತಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು.

ಆನ್‌ ಲೈನ್ ನೋಂದಣಿ ಬೆಳಿಗ್ಗೆ 10 ರಿಂದ ಪ್ರಾರಂಭವಾಗಲಿದ್ದು, ಪ್ರವೇಶದ ಪ್ರಕ್ರಿಯೆ, ಪ್ರವೇಶ ಮಟ್ಟದ ಅರ್ಹತೆ ಮತ್ತು ಪರೀಕ್ಷೆಯ ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ. ವಾಯುಪಡೆಯ ಎಲ್ಲಾ ದಾಖಲಾತಿಗಳು ಅಗ್ನಿವೀರ್ ವಾಯು ಮೂಲಕ ಮಾತ್ರ ನಡೆಯುತ್ತವೆ.

ಇನ್ನು ಆನ್‌ಲೈನ್ ಪರೀಕ್ಷೆಯನ್ನು ಜುಲೈ 24 ರಿಂದ ಜುಲೈ 31 ರವರೆಗೆ ದೇಶಾದ್ಯಂತ 250 ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಈ ವರ್ಷದ ಅಂತ್ಯದೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಂದಿನ ತಿಂಗಳ 1 ರಿಂದ ಸೇನೆ ಮತ್ತು ನೌಕಾಪಡೆ ನೋಂದಣಿ ಪ್ರಕ್ರಿಯೆ ಆರಂಭಿಸಲಿದೆ ಎಂದು ಭಾರತೀಯ ವಾಯುಪಡೆ ಮಾಹಿತಿ ನೀಡಿದೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

4 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

5 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago