Featured

ಅಜರ್‌ ಮಸೂದ್‌ಗೆ ಜಾಗತಿಕ ಉಗ್ರ ಪಟ್ಟ ;ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಜಯ .. -Vishwanews24

ವಿಶ್ವಸಂಸ್ಥೆ: ಪುಲ್ವಾಮಾ ಉಗ್ರ ದಾಳಿಯ ರೂವಾರಿ ಜೈಷೆ ಮೊಹಮದ್‌ ಉಗ್ರ ಸಂಘಟನೆಯ ಮುಖಂಡ ಮಸೂದ್‌ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಕೊನೆಗೂ ಸೇರಿಸಲಾಗಿದೆ.

ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸಂಸ್ಥಾಪಕನೂ ಆದ ಅಜರ್​ಗೆ ಪಾಕಿಸ್ತಾನದ ಪಕ್ಷಪಾತಿಯಾದ ಚೀನಾ ವಿಟೋ ಅಧಿಕಾರ ಬಳಸಿಕೊಂಡು ದಶಕಗಳಿಂದ ರಕ್ಷಣೆ ನೀಡುತ್ತಿತ್ತು. ಆದರೆ ವಿಶ್ವಸಮುದಾಯ ಭಾರತವನ್ನು ಬೆಂಬಲಿಸಿ ಚೀನಾವನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಇಕ್ಕಟ್ಟಿಗೆ ಸಿಲುಕಿದ ಡ್ರಾ್ಯಗನ್ ರಾಷ್ಟ್ರ ಅಜರ್​ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ನಿರ್ಣಯಕ್ಕೆ ಎತ್ತಿದ್ದ ‘ತಾಂತ್ರಿಕ ಕಾರಣ’ದ ಆಕ್ಷೇಪವನ್ನು ಬುಧವಾರ ಹಿಂಪಡೆಯಿತು. ಇದರ ಬೆನ್ನಲ್ಲೇ ವಿಶ್ವಸಂಸ್ಥೆ ಭದ್ರತಾ ಮಂಡಳಿಯ 1267ನೇ ನಿರ್ಬಂಧ ಸಮಿತಿ ನಿರ್ಣಯ ಅಂಗೀಕರಿಸಿದೆ.ಇದು ಭಾರತದ ರಾಜತಾಂತ್ರಿಕ ಗೆಲುವು ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಜೈಪುರದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಮೋದಿ, ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟಕ್ಕೆ ಇದು ಸಂದ ಜಯವಾಗಿದೆ. ಇದು 130 ಕೋಟಿ ಭಾರತೀಯರ ದನಿ ವಿಶ್ವದೆಲ್ಲೆಡೆ ಕೇಳುವಂತಾಗಿದೆ ಎಂದರು.

ನಿರಂತರ ವಿಧ್ವಂಸ್ಕಕ ಕೃತ್ಯಗಳನ್ನು ಎಸಗುತ್ತಿದ್ದ ಅಜರ್‌ ಮಸೂದ್‌ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸಲು ಭಾರತ ಒತ್ತಡ ಹೇರಿತ್ತು. ಪುಲ್ವಾಮಾ ಉಗ್ರ ದಾಳಿಯ ನಂತರವಂತೂ ಭಾರತ ಒತ್ತಡವನ್ನು ಹೆಚ್ಚಿಸಿತ್ತು. ಇದಕ್ಕೆ ಅಮೆರಿಕ, ರಷ್ಯಾ, ಫ್ರಾನ್ಸ್‌ ಕೂಡ ಬೆಂಬಲ ನೀಡಿತ್ತು. ಈಗ ಭಾರತದ ಪ್ರಯತ್ನಕ್ಕೆ ಜಯ ದಕ್ಕಿದೆ.

“ಪ್ರತಿ ಭಾರತೀಯನೂ ಹೆಮ್ಮೆ ಪಡುವಂಥ ದಿನ ಇದು. ಜಾಗತಿಕ ಸಮುದಾಯ ಮತ್ತು ಮಾನವೀಯ ಮೌಲ್ಯಗಳಲ್ಲಿ ನಂಬಿಕೆ ಇಟ್ಟು ನಮ್ಮನ್ನು ಬೆಮಬಲಿಸಿದ ಎಲ್ಲರಿಗೂ ನಾನು ಕೃತಜ್ಞತೆ ಅರ್ಪಿಸುತ್ತೇನೆ. ಭಯೋತ್ಪಾದನೆಯ ಬಗೆಗಿನ ಭಾರತದ ಹೋರಾಟ ಮುಂದುವರಿಯಲಿದೆ. ನಮ್ಮ ಭೂಮಿಯಲ್ಲಿ ಶಾಂತಿ ಮತ್ತು ಭ್ರಾತೃತ್ವ ನೆಲೆಸುವವರೆಗೆ ನಾವು ಹೋರಾಡುತ್ತೇವೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago