ಹಾಸನ: ಹಾಸನ ಲೋಕಸಭೆ ಕ್ಷೇತ್ರದಿಂದ ಗೆದ್ದು ಬಂದಿರುವ ಏಕೈಕ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ತಮ್ಮ ತಾತ ಎಚ್.ಡಿ ದೇವೇಗೌಡ ಅವರ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ತಾತ ದೇವೇಗೌಡರು ಮತ್ತೆ ಹಾಸನದಿಂದಲೇ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಲಿ ಎಂಬ ಲೆಕ್ಕಾಚಾರದೊಂದಿಗೆ ತಮ್ಮ ಗೆಲುವನ್ನು ತ್ಯಾಗ ಮಾಡಿ ರಾಜೀನಾಮೆ ನೀಡುವುದಾಗಿ ಪ್ರಜ್ವಲ್ ಘೋಷಿಸಿದ್ದಾರೆ.
ತಾತನ ಸೋಲಿನಿಂದ ಮನಸ್ಸಿಗೆ ನೋವಾಗಿದ್ದು ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಪ್ರಜ್ವಲ್ ರೇವಣ್ಣ ಘೋಷಿಸಿದ್ದಾರೆ. ಬಳಿಕ ತಾತನನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುವುದಾಗಿಯೂ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶ ಗುರುವಾರ ಪ್ರಕಟವಾದಾಗ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಗೌಡರ ಕುಟುಂಬದ ಮೂವರ ಪೈಕಿ ಪ್ರಜ್ವಲ್ ಮಾತ್ರ ಗೆದ್ದಿದ್ದರು. ಗೆದ್ದ ಮರುದಿನವೇ ಕ್ಷೇತ್ರದ ತ್ಯಾಗಕ್ಕೆ ಪ್ರಜ್ವಲ್ ಮುಂದಾಗಿರುವುದು ಭಾವನಾತ್ಮಕ ಒತ್ತಡದಿಂದ ಕೈಗೊಂಡ ನಡೆಯೇ ಅಥವಾ ನಿಜಕ್ಕೂ ದೇವೇಗೌಡರು ಮತ್ತೆ ಹಾಸನದಿಂದ ಸ್ಪರ್ಧಿಸಿ ಗೆದ್ದು ಸಂಸತ್ ಪ್ರವೇಶಿಸಲು ಬಯಸಿದ್ದಾರೆಯೇ ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…