ನವದೆಹಲಿ: ಭಾರತದ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಇರುವ 100 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನಾಣ್ಯದ ಒಂದು ಭಾದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಇರಲಿದ್ದು, ನಾಣ್ಯ 35 ಗ್ರಾಂ ತೂಕ ಇರಲಿದ್ದು, ಇದರ ಮೇಲೆ ದೇವನಾಗರಿ ಹಾಗೂ ಇಂಗ್ಲಿಷ್ನಲ್ಲಿ ವಾಜಪೇಯಿ ಹೆಸರು ಮುದ್ರಣಗೊಳ್ಳಲಿದೆ. 1924ರಿಂದ 2018ರವರೆಗಿನ ಅವರ ಚಿತ್ರಗಳು ಇದರಲ್ಲಿ ಇರಲಿದ್ದು, ಜನ್ಮ ದಿನಾಂಕ ಹಾಗೂ ನಿಧನರಾದ ದಿನಾಂಕ ಕೂಡ ನಾಣ್ಯದಲ್ಲಿರಲಿದೆ.
ನಾಣ್ಯದ ಮತ್ತೊಂದು ಭಾಗದಲ್ಲಿ ಅಶೋಕ ಸ್ಥಂಭದ ಸಿಂಹದ ಲಾಂಛನ ಮತ್ತು ಮಧ್ಯಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ‘ಸತ್ಯಮೇವ ಜಯತೇ’ ಸಾಲು ಇರಲಿದೆ. ಎಡಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ‘ಭಾರತ್’ ಮತ್ತು ಬಲಭಾಗದಲ್ಲಿ ಇಂಗ್ಲಿಷ್ನಲ್ಲಿ ‘ಇಂಡಿಯಾ’ ಎಂದು ಬರೆದಿರುತ್ತದೆ. ಸಿಂಹದ ಲಾಂಛನದ ಕೆಳಗೆ ರೂಪಾಯಿ ಚಿಹ್ನೆ ಹಾಗೂ 100 ರೂ. ಎಂದು ಅಚ್ಚಾಗಲಿದೆ.
ದೇಶಕಂಡ ಅತ್ಯುತ್ತಮ ನಾಯಕ, ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕಳೆದ ಆಗಸ್ಟ್ 16ರಂದು ತಮ್ಮ 93ನೇ ವಯಸ್ಸಿನಲ್ಲಿ ನಿಧನರಾದರು. ಅವರು 6 ವರ್ಷ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ..
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…