Featured

ಅಟಲ್​ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಹೊಂದಿರುವ 100 ರೂ. ನಾಣ್ಯ ಬಿಡುಗಡೆ ಮಾಡಲು ನಿರ್ಧಾರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಭಾರತದ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಇರುವ 100 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನಾಣ್ಯದ ಒಂದು ಭಾದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಇರಲಿದ್ದು, ನಾಣ್ಯ 35 ಗ್ರಾಂ ತೂಕ ಇರಲಿದ್ದು, ಇದರ ಮೇಲೆ ದೇವನಾಗರಿ ಹಾಗೂ ಇಂಗ್ಲಿಷ್​ನಲ್ಲಿ ವಾಜಪೇಯಿ ಹೆಸರು ಮುದ್ರಣಗೊಳ್ಳಲಿದೆ. 1924ರಿಂದ 2018ರವರೆಗಿನ ಅವರ ಚಿತ್ರಗಳು ಇದರಲ್ಲಿ ಇರಲಿದ್ದು, ಜನ್ಮ ದಿನಾಂಕ ಹಾಗೂ ನಿಧನರಾದ ದಿನಾಂಕ ಕೂಡ ನಾಣ್ಯದಲ್ಲಿರಲಿದೆ.

ನಾಣ್ಯದ ಮತ್ತೊಂದು ಭಾಗದಲ್ಲಿ ಅಶೋಕ ಸ್ಥಂಭದ ಸಿಂಹದ ಲಾಂಛನ ಮತ್ತು ಮಧ್ಯಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ‘ಸತ್ಯಮೇವ ಜಯತೇ’ ಸಾಲು ಇರಲಿದೆ. ಎಡಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ‘ಭಾರತ್’ ಮತ್ತು ಬಲಭಾಗದಲ್ಲಿ ಇಂಗ್ಲಿಷ್‌ನಲ್ಲಿ ‘ಇಂಡಿಯಾ’ ಎಂದು ಬರೆದಿರುತ್ತದೆ. ಸಿಂಹದ ಲಾಂಛನದ ಕೆಳಗೆ ರೂಪಾಯಿ ಚಿಹ್ನೆ ಹಾಗೂ 100 ರೂ. ಎಂದು ಅಚ್ಚಾಗಲಿದೆ.

ದೇಶಕಂಡ ಅತ್ಯುತ್ತಮ ನಾಯಕ, ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕಳೆದ ಆಗಸ್ಟ್​ 16ರಂದು ತಮ್ಮ 93ನೇ ವಯಸ್ಸಿನಲ್ಲಿ ನಿಧನರಾದರು. ಅವರು 6 ವರ್ಷ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ..

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago