ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮ ದಿನಾಚರಣೆ. ಈ ಹಿನ್ನೆಲೆಯಲ್ಲಿ ವಾಜಪೇಯಿ ಸಮಾಧಿಗೆ ಪ್ರಧಾನ ಮಂತ್ರಿ ನರೇಂದ್ರ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪುಷ್ಪನಮನ ಸಲ್ಲಿಸಿದ್ದಾರೆ.
ದೆಹಲಿಯ ರಾಜ್‍ಘಾಟ್‍ನಲ್ಲಿ ಸದೈವ ಅಟಲ್ ಸ್ಮಾರಕದಲ್ಲಿ ರಾಷ್ಟ್ರ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ಗೌರವಾನ್ವಿತ ಅಟಲ್ ಜಿ ಅವರ ಜನ್ಮದಿನದಂದು ಅವರಿಗೆ ನಮನಗಳು. ಅಟಲ್ ಜಿ ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇವೆ. ದೇಶಕ್ಕೆ ಅವರ ಶ್ರೀಮಂತ ಸೇವೆಯಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಭಾರತವನ್ನು ಬಲಿಷ್ಠ ಹಾಗೂ ಅಭಿವೃದ್ಧಿಗೊಳಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಅಭಿವೃದ್ಧಿ ಉಪಕ್ರಮಗಳು ಲಕ್ಷಾಂತರ ಭಾರತೀಯರ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರಿವೆ ಎಂದು ಹೇಳಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ಅಟಲ್ ಜಿ ಅವರು ತಮ್ಮ ಅಚಲವಾದ ತತ್ವಗಳು ಮತ್ತು ಅದ್ಭುತ ಭಕ್ತಿಯಿಂದ ದೇಶದಲ್ಲಿ ಅಂತ್ಯೋದಯ ಮತ್ತು ಉತ್ತಮ ಆಡಳಿತದ ದೃಷ್ಟಿಕೋನವನ್ನು ಸಾಕಾರಗೊಳಿಸುವ ಮೂಲಕ ಭಾರತೀಯ ರಾಜಕೀಯಕ್ಕೆ ಹೊಸ ದಿಕ್ಕನ್ನು ನೀಡಿದರು. ಇಂತಹ ಅದ್ವಿತೀಯ ದೇಶಭಕ್ತ ಗೌರವಾನ್ವಿತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ನಮನಗಳು ಎಂದು ಬರೆದುಕೊಂಡಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…