Featured

ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮ ದಿನಾಚರಣೆ ; ಗಣ್ಯರಿಂದ ಪುಷ್ಪನಮನ –  Vishwanews24

ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮ ದಿನಾಚರಣೆ ; ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಸೇರಿ ಗಣ್ಯರಿಂದ ಪುಷ್ಪನಮನ –  Vishwanews24

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ 97ನೇ ಜನ್ಮ ದಿನಾಚರಣೆ. ಈ ಹಿನ್ನೆಲೆಯಲ್ಲಿ ವಾಜಪೇಯಿ ಸಮಾಧಿಗೆ ಪ್ರಧಾನ ಮಂತ್ರಿ ನರೇಂದ್ರ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪುಷ್ಪನಮನ ಸಲ್ಲಿಸಿದ್ದಾರೆ.

ದೆಹಲಿಯ ರಾಜ್‍ಘಾಟ್‍ನಲ್ಲಿ ಸದೈವ ಅಟಲ್ ಸ್ಮಾರಕದಲ್ಲಿ ರಾಷ್ಟ್ರ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ಗೌರವಾನ್ವಿತ ಅಟಲ್ ಜಿ ಅವರ ಜನ್ಮದಿನದಂದು ಅವರಿಗೆ ನಮನಗಳು. ಅಟಲ್ ಜಿ ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇವೆ. ದೇಶಕ್ಕೆ ಅವರ ಶ್ರೀಮಂತ ಸೇವೆಯಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಭಾರತವನ್ನು ಬಲಿಷ್ಠ ಹಾಗೂ ಅಭಿವೃದ್ಧಿಗೊಳಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಅಭಿವೃದ್ಧಿ ಉಪಕ್ರಮಗಳು ಲಕ್ಷಾಂತರ ಭಾರತೀಯರ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರಿವೆ ಎಂದು ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ಅಟಲ್ ಜಿ ಅವರು ತಮ್ಮ ಅಚಲವಾದ ತತ್ವಗಳು ಮತ್ತು ಅದ್ಭುತ ಭಕ್ತಿಯಿಂದ ದೇಶದಲ್ಲಿ ಅಂತ್ಯೋದಯ ಮತ್ತು ಉತ್ತಮ ಆಡಳಿತದ ದೃಷ್ಟಿಕೋನವನ್ನು ಸಾಕಾರಗೊಳಿಸುವ ಮೂಲಕ ಭಾರತೀಯ ರಾಜಕೀಯಕ್ಕೆ ಹೊಸ ದಿಕ್ಕನ್ನು ನೀಡಿದರು. ಇಂತಹ ಅದ್ವಿತೀಯ ದೇಶಭಕ್ತ ಗೌರವಾನ್ವಿತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ನಮನಗಳು ಎಂದು ಬರೆದುಕೊಂಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago