ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಬಳಿ ಇರುವ ಪುರ್ಲುಮಕ್ಕಿಯಲ್ಲಿ ಅಡಿಕೆ ಕದ್ದ ಆರೋಪದಲ್ಲಿ ಬಾಲಕನೊಬ್ಬನನ್ನು ಮನಬಂದಂತೆ ಥಳಿಸಲಾಗಿತ್ತು. ಬಾಲಕನ ಮೇಲೆ ಸ್ಥಳೀಯರು ಮಾರಣಾಂತಿಕ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾನೆ. ಆತನ ಮೇಲೆ ಹಲ್ಲೆ ನಡೆಸಿದ 10 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಗುತ್ತಿಗಾರ್‌ನ 16 ವರ್ಷದ ಬಾಲಕನ ಮೇಲೆ 10 ಜನರು ಮನಬಂದಂತೆ ಥಳಿಸಿದ್ದಾರೆ. ಬಾಲಕನಿಗೆ ಥಳಿಸಿರುವ ಹಲ್ಲೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ವೀಡಿಯೋವನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಡಿಕೆ ಕದ್ದಿರುವ ಆರೋಪದಲ್ಲಿ ಬಾಲಕನಿಗೆ ಥಳಿಸಲಾಗಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಅನ್ವಯ ಗುತ್ತಿಗಾರ್ ಸುತ್ತಮುತ್ತಲಿನ ಮನೆಗಳಲ್ಲಿ ವಾಸಿಸುವ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್ಚಂದ್ರ ಮತ್ತು ಚೇತನ್ ಗುತ್ತಿಗಾರ್ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…