The Minister of State (Independent Charge) for Micro, Small & Medium Enterprises, Shri K.H. Muniyappa interacting with the Press, in New Delhi on April 02, 2013.
ಬೆಂಗಳೂರು : ಗಲ್ಫ್ ಪ್ರದೇಶದ ಯುದ್ಧ ಪರಿಣಾಮ ದೇಶದಾದ್ಯಂತ ಕಂಡುಬರುತ್ತಿದ್ದು, ಕರುನಾಡಲ್ಲೂ ಅಡುಗೆ ಅನಿಲದ ಅಭಾವ ಗಂಭೀರವಾಗುತ್ತಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಹೋಟೆಲ್‌ಗಳು, ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. ಜನರು ಖಾಲಿ ಸಿಲಿಂಡರ್ ಹಿಡಿದು ಅನಿಲ ಏಜೆನ್ಸಿಗಳತ್ತ ಧಾವಿಸುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ. ಈ ಪರಿಸ್ಥಿತಿಯಲ್ಲಿ ಮಾತನಾಡಿದ ಆಹಾರ ಸಚಿವ ಕೆ. ಎಚ್. ಮುನಿಯಪ್ಪ, ಸಿಲಿಂಡರ್ ಕೊರತೆಯ ಹಿನ್ನೆಲೆ ಗ್ರಾಮೀಣ ಪ್ರದೇಶದ ಜನರು ತಾತ್ಕಾಲಿಕವಾಗಿ ಸೌದೆ ಒಲೆಗಳನ್ನು ಬಳಸುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರಿನಿಂದ ಸುಮಾರು 40 ಕಿಮೀ ದೂರ ಹೋದರೆ ಸೌದೆ ಲಭ್ಯವಿದ್ದು, ಅರಣ್ಯ ಪ್ರದೇಶದ ಹಸಿ ಮರಗಳನ್ನು ಕಡಿದು ಬಳಸಬಾರದು, ಬದಲಿಗೆ ಒಣ ಕಟ್ಟಿಗೆಗಳನ್ನು ಮಾತ್ರ ಬಳಸಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಉಂಟಾದ ಸಿಲಿಂಡರ್ ಕೊರತೆಗೆ ಕೇಂದ್ರ ಸರ್ಕಾರವೇ ಕಾರಣವೆಂದು ಆರೋಪಿಸಿದ ಅವರು, ಡಿಸ್ಟ್ರಿಬ್ಯೂಟರ್‌ಗಳ ವಿರುದ್ಧ ದೂರುಗಳು ಬರುತ್ತಿವೆ ಎಂದರು. ಗೃಹ ಬಳಕೆಯ ಸಿಲಿಂಡರ್‌ಗಳ ಪೂರೈಕೆ ಹಿಂದಿನಂತೆ ಮುಂದುವರಿಯಲಿದೆ ಎಂದು ಭರವಸೆ ನೀಡಿದ್ದಾರೆ. ಈಗಾಗಲೇ ಆಯಿಲ್ ಕಂಪನಿಗಳಿಗೆ ಅಗತ್ಯ ಸೂಚನೆ ನೀಡಲಾಗಿದ್ದು, ಗ್ರಾಹಕರ ಮನೆ ಬಾಗಿಲಿಗೆ ಸಕಾಲದಲ್ಲಿ ಸಿಲಿಂಡರ್ ತಲುಪಿಸಬೇಕು ಎಂದು ತಿಳಿಸಿದ್ದಾರೆ. ಪ್ರಸ್ತುತ ರಾಜ್ಯಕ್ಕೆ ಸುಮಾರು 40% ಸಿಲಿಂಡರ್ ಪೂರೈಕೆ ಆಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:
ಇಂದಿನಿಂದಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ವಿತರಣೆಯನ್ನು ಹೆಚ್ಚಿಸಲಾಗಿದ್ದು, ಪೂರೈಕೆಯನ್ನು 68%ಕ್ಕೆ ಏರಿಸಲಾಗಿದೆ. ಶಿಕ್ಷಣ ಸಂಸ್ಥೆಗಳು, ವಸತಿ ನಿಲಯಗಳು, ಆಸ್ಪತ್ರೆಗಳು ಸೇರಿದಂತೆ ಅಗತ್ಯ ಸೇವೆಗಳಿಗಾಗಿ ಸಾವಿರಾರು ಸಿಲಿಂಡರ್‌ಗಳನ್ನು ಹಂಚಿಕೆ ಮಾಡಲಾಗಿದೆ. ಹೋಟೆಲ್, ಡಾಬಾ, ರೆಸ್ಟೋರೆಂಟ್, ಕ್ಯಾಂಟೀನ್, ಬೇಕರಿ ಹಾಗೂ ಇತರೆ ವಾಣಿಜ್ಯ ಬಳಕೆಗಳಿಗೆ ದೊಡ್ಡ ಪ್ರಮಾಣದಲ್ಲಿ ಸಿಲಿಂಡರ್ ವಿತರಣೆ ನಡೆಯುತ್ತಿದೆ.
ಇದೇ ವೇಳೆ, ಹೆಚ್ಚುವರಿ ದರಕ್ಕೆ ಸಿಲಿಂಡರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ವಸೂಲಿ ಮಾಡಿದರೆ ಪರವಾನಗಿ ರದ್ದು ಮಾಡುವುದಾಗಿ ತಿಳಿಸಿದ್ದಾರೆ. ಈಗಾಗಲೇ ಅನಧಿಕೃತ ದಾಸ್ತಾನು ಪ್ರಕರಣಗಳಲ್ಲಿ 1169 ಕೇಸ್ ದಾಖಲಾಗಿದ್ದು, 1603 ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಗ್ಯಾಸ್ ಅಭಾವದ ನಡುವೆ ಜನರು ಪರ್ಯಾಯ ಮಾರ್ಗಗಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಪೂರೈಕೆ ಸುಧಾರಿಸಲು ಕ್ರಮ ಕೈಗೊಳ್ಳುತ್ತಿದೆ.
ಇದನ್ನೂ ಓದಿ:
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…