ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ – vishwanews24
ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ
ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸಾಲು ಸಾಲು ಹಬ್ಬಗಳು ಬರುತ್ತಿರುವ ಹೊತ್ತಿನಲ್ಲೇ ಕೇಂದ್ರ ಸಾರ್ವಜನಿಕರಿಗೆ ಗುಡ್‌ನ್ಯೂಸ್ ನೀಡಿದೆ.
ಹಬ್ಬದ ಸೀಸನ್ ಹೊತ್ತಲ್ಲೇ ಕೇಂದ್ರ ಸರ್ಕಾರ, ತಾಳೆ ಎಣ್ಣೆ, ಸೋಯಾ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಸೇರಿದಂತೆ ಪ್ರಮುಖ ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸಿ ಆದೇಶಿಸಿದೆ. ಇದರ ಬೆನ್ನಲ್ಲೇ ಅಡುಗೆ ಎಣ್ಣೆಗಳ ಬೆಲೆ ಕಡಿಮೆಯಾಗುವ ನಿರೀಕ್ಷೆಯಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ – vishwanews24
ಪಾಮ್ ಎಣ್ಣೆ ಮತ್ತು ಎಣ್ಣೆಯ ಮೇಲಿನ ಆಮದು ಸುಂಕವನ್ನು ಶೇ.10ರಿಂದ ಶೇ.5ಕ್ಕೆ ಇಳಿಸಲಾಗಿದೆ. ಸೂರ್ಯಕಾಂತಿ ಎಣ್ಣೆಯ ಮೇಲಿನ ಆಮದು ಸುಂಕವನ್ನು ಶೇ.10ರಿಂದ ಶೂನ್ಯಕ್ಕೆ ಇಳಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ ಕೆಲ ಅಡುಗೆ ಎಣ್ಣೆಯ ಬೆಲೆ ಶೆ.20ರಷ್ಟು ಏರಿಕೆಯಾಗಿದೆ. ಇದೀಗ ಆಮದು ಸುಂಕ ಕಡಿತಗೊಳಿಸಿರುವುದರಿಂದ ಅಡುಗೆ ಎಣ್ಣೆಯ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ.
