Featured

ಅಡುಗೆ ಸಿಲಿಂಡರ್‌ ಸ್ಫೋಟ : ಒಂದೇ ಕುಟುಂಬದ 8 ಮಂದಿ ಗಾಯ ; ಇಬ್ಬರ ಸ್ಥಿತಿ ಗಂಭೀರ – vishwanews24

ಅಡುಗೆ ಸಿಲಿಂಡರ್‌ ಸ್ಫೋಟ : ಒಂದೇ ಕುಟುಂಬದ 8 ಮಂದಿ ಗಾಯ ; ಇಬ್ಬರ ಸ್ಥಿತಿ ಗಂಭೀರ

ಬಳ್ಳಾರಿ: ಅಡುಗೆ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ  ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಎಲ್ಲರೂ ಮಲಗಿರುವಾಗ ಬೆಳಗ್ಗಿನ ಜಾವ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಯೇ ಕುಸಿದಿದ್ದು, ವಕೀಲ ಹಾಲಪ್ಪ, ಸಹೋದರ ಮೈಲಾರಪ್ಪ ಸೇರಿದಂತೆ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದಾರೆ.

ಸದ್ಯ ಗಾಯಾಳುಗಳನ್ನ‌ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ, ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಘಟನಾ ಸ್ಥಳ ಪರಿಶೀಲಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago