ಅಡ್ಡಮತ ಚಲಾಯಿಸಿ ಬಿಜೆಪಿಗೆ ಶಾಕ್ ನೀಡಿದ ಎಸ್.ಟಿ.ಸೋಮಶೇಖರ್‌ – Vishwanews24

Featured, ರಾಜ್ಯ ನ್ಯೂಸ್

ಅಭಿವೃದ್ಧಿಗೆ ನನ್ನ ಮತ , ಆತ್ಮಸಾಕ್ಷಿಯಾಗಿ ಮತದಾನ ಮಾಡಿದ್ದೇನೆ ..

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ. ಅಡ್ಡ ಮತದಾನ ಮಾಡುವ ಮೂಲಕ ಸ್ವಪಕ್ಷಕ್ಕೆ ದೊಡ್ಡ ಹೊಡೆತ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಅಭಿವೃದ್ಧಿಗೆ ನನ್ನ ಮತ ಎಂದಿದ್ದ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ. ಆತ್ಮಸಾಕ್ಷಿಯಾಗಿ ನಾನು ಮತದಾನ ಮಾಡಿದ್ದೇನೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ಅವರು ಸ್ಪಷ್ಟಪಡಿಸಿದ್ದಾರೆ.

ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಯುವಜನತೆಯ ಪಾಲಿಗೆ ಕಂಟಕವಾಗಿರುವ  ಅಗ್ನಿವೀರ ಯೋಜನೆ ರದ್ದು: ಕಾಂಗ್ರೆಸ್‌ – Vishwanews24

ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯಿಂದಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬಿಜೆಪಿ ನಾಯಕರು ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡಿದ್ದು ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಸೂಚನೆ ನೀಡಿದ್ದರು. ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ.

Leave a Reply