ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ. ಅಡ್ಡ ಮತದಾನ ಮಾಡುವ ಮೂಲಕ ಸ್ವಪಕ್ಷಕ್ಕೆ ದೊಡ್ಡ ಹೊಡೆತ ನೀಡಿದ್ದಾರೆ.
ರಾಜ್ಯಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಅಭಿವೃದ್ಧಿಗೆ ನನ್ನ ಮತ ಎಂದಿದ್ದ ಶಾಸಕ ಎಸ್.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ. ಆತ್ಮಸಾಕ್ಷಿಯಾಗಿ ನಾನು ಮತದಾನ ಮಾಡಿದ್ದೇನೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ಅವರು ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯಿಂದಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬಿಜೆಪಿ ನಾಯಕರು ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡಿದ್ದು ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಸೂಚನೆ ನೀಡಿದ್ದರು. ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…