ಬೆಂಗಳೂರು,: ”ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರು ಇಟ್ಟರೆ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ” ಎಂದು ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದಾರೆ.
ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನು ಇಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೀರ್ಮಾನಕ್ಕೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಈ ಸಂಬಂಧ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
”ಈ ವಾರ್ಡ್‌ನಲ್ಲಿ ಕೇವಲ ಮುಸಲ್ಮಾನರ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಲಾಗಿದೆ. ಸಮಾಜ ಸೇವಕರ ಹೆಸರಿನಲ್ಲಿ ಕೋಮು ವೈಭವೀಕರಣ ಮಾಡುವುದು ಸರಿಯಲ್ಲ. ಬೃಹತ್ ಬೆಂಗಳೂರು ಮಹಾರನಗರ ಪಾಲಿಕೆಯ ಈ ನಿರ್ಧಾರದಿಂದ ಸಮಾಜದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ” ಎಂದು ಹೇಳಿದ್ದಾರೆ.
”ಬಿಬಿಎಂಪಿಯಂತೆ ಬಹುಸಂಖ್ಯಾತ ಹಿಂದುಗಳ ಬಾಹುಳ್ಯವಿರುವ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯತ್‌ಗಳು ಇದೇ ನಿರ್ಧಾರವನ್ನು ತೆಗೆದುಕೊಂಡರೆ ಪರಿಸ್ಥಿತಿ ಊಹಿಸಲೂ ಸಾಧ್ಯವಿಲ್ಲ. ಇಂದು ಕೋಮಿನ ತುಷ್ಟೀಕರಣಕ್ಕಾಗಿ ಬಿಬಿಎಂಪಿ ಈ ರೀತಿ ನಿರ್ಣಯ ತೆಗೆದುಕೊಳ್ಳುತ್ತಿರುವುದು ಬೇಜವಾಬ್ದಾರಿತನದ ಪರಮಾವಧಿ ಎಂದು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.
”ಹಾಗೇನಾದರೂ ಈ ರಸ್ತೆಗಳಿಗೆ ಹೆಸರನ್ನು ಇಡಕೇಬೇಕಾದ ಅನಿವಾರ್ಯತೆ ಇದ್ದರೆ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ವೀರ ಯೋಧರ, ರಾಷ್ಟ್ರ ಕಂಡ ಮಹಾನ್ ವ್ಯಕ್ತಿಗಳ, ದೇಶಕ್ಕಾಗಿ ಹೋರಾಡಿದ ವೀರ ಸೈನಿಕರ ಹೆಸರನ್ನು ಇಟ್ಟಲ್ಲಿ ಪಾದರಾಯಣಪುರ ಹೆಸರಿಗೂ ಗೌರವ ದೊರಲುವಂತಾಗುತ್ತದೆ” ಎಂದಿದ್ದಾರೆ.
”ಬಿಬಿಎಂಪಿಯ ಪಾದರಾಯಣಪುರದ ಅಡ್ಡರಸ್ತೆಗಳು ಹಾಗೂ ಮುಖ್ಯ ರಸ್ತೆಗಳಿಗೆ ಮುಸಲ್ಮಾನರ ಹೆಸರನ್ನು ನಾಮಕರಣ ಮಾಡಬಾರದು” ಎಂದು ಆಗ್ರಹಿಸಿದ್ದಾರೆ
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…