Featured

ಅಡ್ಡರಸ್ತೆಗಳು ಹಾಗೂ ಮುಖ್ಯ ರಸ್ತೆಗಳಿಗೆ ಮುಸಲ್ಮಾನರ ಹೆಸರನ್ನು ನಾಮಕರಣ ಮಾಡಬಾರದು : ಅನಂತಕುಮಾರ ಹೆಗಡೆ -Vishwanews24

ಅಡ್ಡರಸ್ತೆಗಳು ಹಾಗೂ ಮುಖ್ಯ ರಸ್ತೆಗಳಿಗೆ ಮುಸಲ್ಮಾನರ ಹೆಸರನ್ನು ನಾಮಕರಣ ಮಾಡಬಾರದು : ಅನಂತಕುಮಾರ ಹೆಗಡೆ -Vishwanews24

ಬೆಂಗಳೂರು,: ”ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರು ಇಟ್ಟರೆ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ” ಎಂದು ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಹೇಳಿದ್ದಾರೆ.

ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನು ಇಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೀರ್ಮಾನಕ್ಕೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಈ ಸಂಬಂಧ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

”ಈ ವಾರ್ಡ್‌ನಲ್ಲಿ ಕೇವಲ ಮುಸಲ್ಮಾನರ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಲಾಗಿದೆ. ಸಮಾಜ ಸೇವಕರ ಹೆಸರಿನಲ್ಲಿ ಕೋಮು ವೈಭವೀಕರಣ ಮಾಡುವುದು ಸರಿಯಲ್ಲ. ಬೃಹತ್‌ ಬೆಂಗಳೂರು ಮಹಾರನಗರ ಪಾಲಿಕೆಯ ಈ ನಿರ್ಧಾರದಿಂದ ಸಮಾಜದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ” ಎಂದು ಹೇಳಿದ್ದಾರೆ.

”ಬಿಬಿಎಂಪಿಯಂತೆ ಬಹುಸಂಖ್ಯಾತ ಹಿಂದುಗಳ ಬಾಹುಳ್ಯವಿರುವ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯತ್‌ಗಳು ಇದೇ ನಿರ್ಧಾರವನ್ನು ತೆಗೆದುಕೊಂಡರೆ ಪರಿಸ್ಥಿತಿ ಊಹಿಸಲೂ ಸಾಧ್ಯವಿಲ್ಲ. ಇಂದು ಕೋಮಿನ ತುಷ್ಟೀಕರಣಕ್ಕಾಗಿ ಬಿಬಿಎಂಪಿ ಈ ರೀತಿ ನಿರ್ಣಯ ತೆಗೆದುಕೊಳ್ಳುತ್ತಿರುವುದು ಬೇಜವಾಬ್ದಾರಿತನದ ಪರಮಾವಧಿ ಎಂದು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

”ಹಾಗೇನಾದರೂ ಈ ರಸ್ತೆಗಳಿಗೆ ಹೆಸರನ್ನು ಇಡಕೇಬೇಕಾದ ಅನಿವಾರ್ಯತೆ ಇದ್ದರೆ ಸ್ವಾತಂತ್ಯ್ರಕ್ಕಾಗಿ ಹೋರಾಡಿದ ವೀರ ಯೋಧರ, ರಾಷ್ಟ್ರ ಕಂಡ ಮಹಾನ್‌ ವ್ಯಕ್ತಿಗಳ, ದೇಶಕ್ಕಾಗಿ ಹೋರಾಡಿದ ವೀರ ಸೈನಿಕರ ಹೆಸರನ್ನು ಇಟ್ಟಲ್ಲಿ ಪಾದರಾಯಣಪುರ ಹೆಸರಿಗೂ ಗೌರವ ದೊರಲುವಂತಾಗುತ್ತದೆ” ಎಂದಿದ್ದಾರೆ.

”ಬಿಬಿಎಂಪಿಯ ಪಾದರಾಯಣಪುರದ ಅಡ್ಡರಸ್ತೆಗಳು ಹಾಗೂ ಮುಖ್ಯ ರಸ್ತೆಗಳಿಗೆ ಮುಸಲ್ಮಾನರ ಹೆಸರನ್ನು ನಾಮಕರಣ ಮಾಡಬಾರದು” ಎಂದು ಆಗ್ರಹಿಸಿದ್ದಾರೆ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago