Categories: ಉಡುಪಿ

ಅಣ್ಣಾಮಲೈ ಬಿಜೆಪಿ ಸೇರ್ಪಡೆ : ಕರ್ನಾಟಕ ಬಿಜೆಪಿ ಮುಖಂಡರ ಸಂತಸ ಹಾಗೂ ಶುಭ ಹಾರೈಕೆ -Vishwanews24

ಅಣ್ಣಾಮಲೈ ಬಿಜೆಪಿ ಸೇರ್ಪಡೆ : ಕರ್ನಾಟಕ ಬಿಜೆಪಿ ಮುಖಂಡರ ಸಂತಸ ಹಾಗೂ ಶುಭ ಹಾರೈಕೆ -Vishwanews24

ಬೆಂಗಳೂರು : ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಮಾಜಿ ಅಧಿಕಾರಿ ಅಣ್ಣಾಮಲೈ ಅವರು ಇಂದು ದೆಹಲಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದು ಕರ್ನಾಟಕ ಬಿಜೆಪಿ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ.

ಅಣ್ಣಾಮಲೈ ಬಿಜೆಪಿ ಗೆಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಸುರೇಶ್‌ ಕುಮಾರ್‌ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಹರ್ಷ ವ್ಯಕ್ತಪಡಿಸಿರುವ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವಎಸ್ ಸುರೇಶ್‌ ಕುಮಾರ್‌ ಅವರು, ”ಪೋಲಿಸ್ ಇಲಾಖೆಯಲ್ಲಿದ್ದಾಗ ತಮ್ಮ ದಕ್ಷತೆಗೆ, ಕಾರ್ಯತತ್ಪರತೆಗೆ ಹೆಸರಾಗಿದ್ದ ಶ್ರೀ ಅಣ್ಣಾಮಲೈ ರವರು ಇಂದು ಬಿಜೆಪಿಗೆ ಸೇರುತ್ತಿರುವ ವಿಷಯ ಅತ್ಯಂತ ಸಂತಸ ತಂದಿದೆ” ಎಂದು ಹೇಳಿದ್ದಾರೆ.

ಇನ್ನು ಅಣ್ಣಾಮಲೈ ಅವರನ್ನು ತಮ್ಮ ಪಕ್ಷಕ್ಕೆ ಸ್ವಾಗತಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ಅವರು, ”ಕರ್ನಾಟಕ ಕೇಡರ್‌ನ ನಿವೃತ್ತಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ. ಅವರಿಗೆ ಹೃದಯಪೂರ್ವಕ ಸ್ವಾಗತ” ಎಂದಿದ್ದಾರೆ.

ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮತ್ತು ಜನಪ್ರಿಯವಾಗಿ ‘ಸಿಂಗಂ’ ಎಂದು ಕರೆಯಲ್ಪಡುವ ಅಣ್ಣಾಮಲೈ ಅವರು 2019 ರ ಮೇ ತಿಂಗಳಲ್ಲಿ ರಾಜೀನಾಮೆ ನೀಡಿದ್ದರು. ಬಳಿಕ ಬಿಜೆಪಿಗೆ ಸೇರುವ ಅಭಿಲಾಷೆ ವ್ಯಕ್ತಪಡಿಸಿದ್ದರು. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿ.ಟಿ.ರವಿ, ‘ಕರ್ನಾಟಕ ಪೊಲೀಸ್ ಇಲಾಖೆಯ ರಿಯಲ್ ‘ಸಿಂಗಂ’ ಎಂದೇ ಖ್ಯಾತರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರಲಿದ್ದಾರೆ. ತಮ್ಮ ದಕ್ಷ ಕಾರ್ಯವೈಖರಿಯಿಂದ ನಾಡಿನಾದ್ಯಂತ ಹೆಸರುವಾಸಿಯಾದ ಅಣ್ಣಾಮಲೈ ಅವರು ಬಿಜೆಪಿ ಸೇರುತ್ತಿರುವುದು ಅತೀವ ಸಂತಸ ತಂದಿದೆ. ನಿಮಗೆ ಹೃದಯಪೂರ್ವಕ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

 

 

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

3 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

4 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

4 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

4 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

4 days ago