Featured

ಅಣ್ಣ ರಾಮುಲು ಇರುವ ಕಡೆ ತಮ್ಮ ಲಕ್ಷ್ಮಣನಿಗೆ ಯಾವ ತೊಂದರೆ ಇಲ್ಲ ,ನಮ್ಮೆಲ್ಲರ ಉದ್ದೇಶ ಇಡೀ ರಾಜ್ಯದ ಅಭಿವೃದ್ಧಿ : ಲಕ್ಷ್ಮಣ್ ಸವದಿ -Vishwanews24

ಬಳ್ಳಾರಿ : ಜಿಲ್ಲಾ ಉಸ್ತುವಾರಿ ವಿಚಾರದಲ್ಲಿ ಯಾರಿಗೂ ಅಸಮಾಧಾನವಿಲ್ಲ. ನಾನು ಶ್ರೀರಾಮುಲು ಜತೆ ಮಾತಾಡಿದ್ದೇನೆ. ಅವರು ಸಂತೋಷವಾಗಿ ಬಳ್ಳಾರಿಗೆ ಆಹ್ವಾನ ನೀಡಿದ್ದಾರೆ. ಅಣ್ಣ ರಾಮುಲು ಇರುವ ಕಡೆ ತಮ್ಮ ಲಕ್ಷ್ಮಣನಿಗೆ ಯಾವ ತೊಂದರೆ ಇಲ್ಲ. ನಮ್ಮೆಲ್ಲರ ಉದ್ದೇಶ ಇಡೀ ರಾಜ್ಯದ ಅಭಿವೃದ್ಧಿ. ಎಲ್ಲರ ಸಹಕಾರದೊಂದಿಗೆ ಬಳ್ಳಾರಿ‌ ಮಾದರಿ ಜಿಲ್ಲೆಯಾಗಿಸಲು ಶಕ್ತಿ‌ಮೀರಿ ಪ್ರಯತ್ನಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಬಳ್ಳಾರಿಯಲ್ಲಿಂದು ಕಲ್ಯಾಣ ಕರ್ನಾಟಕ ಧ್ವಜಾರೋಣ ಕಾರ್ಯಕ್ರಮವನ್ನು ಬಳ್ಳಾರಿಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೆರವೇರಿಸಿದರೇ, ಯಾದಗಿರಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ನೆರವೇರಿಸಿದ್ದಾರೆ. ಇದೇ ವಿಚಾರವಾಗಿ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸ್ಥಾನ ಕೈ ತಪ್ಪಿದ್ದಕ್ಕಾಗಿ ಶ್ರೀರಾಮುಲು ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿತ್ತು.

ಈ ಕುರಿತಂತೆ ಸ್ಪಷ್ಟ ಪಡಿಸಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಶ್ರೀರಾಮುಲು ನಾನು ಅಣ್ಣ ತಮ್ಮಂದಿರಿದ್ದಂತೆ. ನಮ್ಮ ನಡುವೆ ಯಾವುದೇ ಮನಸ್ಥಾಪವಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕೈ ತಪ್ಪಿದ್ದಕ್ಕಾಗಿ ಶ್ರೀರಾಮುಲು ಅವರಿಗೆ ಬೇಸರವೂ ಇಲ್ಲ. ನಮ್ಮ ಉದ್ದೇಶ ರಾಜ್ಯದ ಅಭಿವೃದ್ಧಿ. ಜಿಲ್ಲೆಯನ್ನು ಎಲ್ಲರ ಸಹಕಾರದೊಂದಿಗೆ ಮಾದರಿ ಜಿಲ್ಲೆಯಾಗಿ ಮಾಡಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago