ಬೆಂಗಳೂರು: ಅಣ್ಣ ಸಿಎಂ ಆಗಲಿ ಅನ್ನೋ ಆಸೆ ಈಗಲೂ ಇದೆ. ಆದರೆ ಅದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಹೈಕಮಾಂಡ್ ಭೇಟಿ ಯಾವುದು ಹೊಸತಲ್ಲ. ನಿರಂತರವಾಗಿ ಭೇಟಿ ಮಾಡುತ್ತಲ್ಲೇ ಇರುತ್ತಾರೆ. ಹೈಕಮಾಂಡ್ ಮುಂದೆ ಡಿಮ್ಯಾಂಡ್ ಇಡಲು ಏನಿದೆ ಪಾರ್ಟಿ ಅವರನ್ನ ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂದಿದ್ದಾರೆ.
ಈಗ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇದ್ದಾರೆ, ಸ್ಥಾನ ಬೇಕು ಅಂತ ಎಂದು ಚೇರ್‌ನಿಂದ ಎಳೆದು ಕೂರಿಸೋಕೆ ಆಗುತ್ತಾ? ಪಕ್ಷದ ಅಧ್ಯಕ್ಷರು ದೆಹಲಿಗೆ ಹೋಗುತ್ತಾ ಇರುತ್ತಾರೆ. ಹೈಕಮಾಂಡ್ ಜೊತೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಹೈಕಮಾಂಡ್ ಭೇಟಿ ಮಾಡಿ ಬರುವುದು ಪ್ರವೃತ್ತಿ. ಡಿಕೆಶಿ ಮುಂದೆ ಯಾವುದೇ ಅಜೆಂಡ ಇಲ್ಲ. ಬೇರೆ ಯಾವುದೇ ಚಿಂತನೆಗಳೂ ಇಲ್ಲ. ಹಕ್ಕು ಅನ್ನೋ ಪ್ರಶ್ನೆ ಇಲ್ಲ ಎಂದು ನುಡಿದ್ದಾರೆ.
ಡಿ.ಕೆ.ಶಿವಕುಮಾರ್ ಹಿಂದೆ ಪ್ರಧಾನಿ ಭೇಟಿ ಆಗುವುದು ಹೈಕಮಾಂಡ್ ಗಮನಕ್ಕೆ ತಂದಿದ್ದರು. ಶಿವರಾತ್ರಿ ಹಬ್ಬದಲ್ಲಿ ಅಮಿತ್ ಶಾ ಭೇಟಿಯೂ ಹೈಕಮಾಂಡ್ ಗಮನಕ್ಕೆ ತಂದಿದ್ದರು ಎಂದು ಹೇಳಿದ್ದಾರೆ.
ಕೇಂದ್ರದ ತೆರಿಗೆ ಕಡಿತ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಷಯ ಅಲ್ಲಲ್ಲಿ ಚರ್ಚೆ ಆಗುತ್ತಿದೆ. ಒಕ್ಕೂಟ ವ್ಯವಸ್ಥೆಯನ್ನು ದುರ್ಬಲ ಮಾಡುವ ಕೆಲಸ ನಡೆಯುತ್ತಿದೆ. ರಾಜ್ಯಗಳಿಗೆ ಶಕ್ತಿ ತುಂಬುವುದು ಬಿಟ್ಟು ಬಲವಂತವಾದ ಕಾನೂನು ಹೇರಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯಗಳ ಅಭಿವೃದ್ಧಿ ಕುಂಠಿತಕ್ಕೆ ಕೇಂದ್ರ ಸರ್ಕಾರ ಯಾವ ರೀತಿ ಕಾರಣ ಆಗುತ್ತಿದೆ ನಾವು ನೋಡ್ತಾ ಇದ್ದೇವೆ. ರಾಷ್ಟ್ರ ಹಾಗೂ ರಾಜ್ಯದ ಜನರು ತಿರುಗಿ ಬೀಳಬಹುದು. ತೆರಿಗೆ ಹಣ ಕೊಡಿ ಎಂದು ನಾನು ಮನವಿ ಮಾಡ್ತೇನೆ. ಜನಸಂಖ್ಯೆ ಆಧಾರದ ಮೇಲೆ ತೆರಿಗೆ ಹಣ ವಿಭಜನೆ ಆಗುತ್ತಿದೆ. ಮಹಿಳಾ ಮೀಸಲಾತಿ ಅನುಮೋದನೆ ಆಗಿದೆ. ಜಾತಿಗಣತಿ ಆಗುವ ಸಾಧ್ಯತೆ ಇದೆ. ಕ್ಷೇತ್ರಗಳನ್ನ ಜಾಸ್ತಿ ಮಾಡಿದರೆ, ಸಂಪೂರ್ಣವಾಗಿ ಉತ್ತರ ಭಾರತದ ಹಿಡಿತಕ್ಕೆ ಹೋಗುತ್ತದೆ. ಬಿಜೆಪಿ ನಾಯಕರು ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…