Featured

ಅತೃಪ್ತ ಕಾಂಗ್ರೆಸ್ ಮುಖಂಡರು ಬಿ.ಎಸ್​​.ವೈ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆ – Vishwanews24

ಕೋಲಾರ:ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಅತೃಪ್ತರ ಸಂಖ್ಯೆ ಹೆಚ್ಚಾಗುತ್ತಿದ್ದು ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​​ ಯಡಿಯೂರಪ್ಪನವರ ಸಮ್ಮುಖದಲ್ಲೇ ಸೇರ್ಪಡೆಯಾಗಿದ್ದು, ಕಾಂಗ್ರೆಸ್​​ ಸಂಸದ ಕೆ.ಎಚ್​​​ ಮುನಿಯಪ್ಪನವರಿಗೆ ಭಾರೀ ಹಿನ್ನಡೆಯಾಗಿದೆ. ಅಲ್ಲದೇ ಬಿಜೆಪಿಯೂ ಸ್ಥಳೀಯ ಕಾಂಗ್ರೆಸ್​​ ನಾಯಕರನ್ನು ಸೆಳೆಯಲು ಮುಂದಾಗಿತ್ತು. ಬಿಎಸ್​​ವೈ ನಿರೀಕ್ಷೆಯಂತೆಯೇ ಅತೃಪ್ತ ಕಾಂಗ್ರೆಸ್ ಮುಖಂಡರು ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ​​​​

ಕೆ.ಎಚ್ ಮುನಿಯಪ್ಪ ಅವರ ವಿರುದ್ಧ ಸದಾ ಕತ್ತಿ ಮಸೆಯುತ್ತಿದ್ದ ಕಾಂಗ್ರೆಸ್ಸಿನ ಸ್ಥಳೀಯ ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ಬಾಜಾಚಿ ಚನ್ನಯ್ಯ ಮತ್ತು ಬಿ.ಪಿ  ಮುನಿವೆಂಕಟಪ್ಪ ಎಂಬುವರು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲೇ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ಧಾರೆ. ಬಿ.ಎಸ್​​​ ಯಡಿಯೂರಪ್ಪನವರ ಸಮ್ಮುಖದಲ್ಲೇ ಸೇರ್ಪಡೆಯಾಗಿದ್ದು, ಸಂಸದ ಮುನಿಯಪ್ಪ ಅವರನ್ನು ಸೋಲಿಸಲೇಬೇಕೆಂಬ ಜಿದ್ದಿಗೆ ಬಿದ್ದಿದ್ಧಾರೆ.

ಕಳೆದ 7 ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಸೋಲುಣಿಸಿರುವ ಮುನಿಯಪ್ಪ ಜಿಲ್ಲೆಯನ್ನು ಕಾಂಗ್ರೆಸ್ ಭದ್ರಕೋಟೆಯನ್ನಾಗಿಸಿದ್ದಾರೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಸತತ ಸೋಲನುಭವಿಸಿರುವ ಮುನಿಯಪ್ಪ, ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷ ಜಯಗಳಿಸಿಲ್ಲ.

ಕೆಎಚ್ ಮುನಿಯಪ್ಪನವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಹೀಗಾಗಿ ಈ ಬಾರಿ ಕಾಂಗ್ರೆಸ್ ಸಂಸದರನ್ನು ಸೋಲಸಬೇಕೆಂಬ ಪಣ ತೊಟ್ಟಿದ್ದೇವೆ. ಈಗಾಗಲೇ ಇದಕ್ಕೆ ಸಿದ್ಧತೆ ನಡೆಸಿಕೊಂಡಿದ್ದೇವೆ ಎಂದು ಬಿಜೆಪಿ ಸೇರಿದ ಕಾಂಗ್ರೆಸ್ ಅತೃಪ್ತ ಮುಖಂಡರು ಹೇಳಿದ್ದಾರೆ.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago