Featured

ಅತೃಪ್ತ ಶಾಸಕರ ರಾಜೀನಾಮೆಯನ್ನು ಸ್ವೀಕರಿಸಬೇಕು : ಬಿ.ಎಸ್.ಯಡಿಯೂರಪ್ಪ -Vishwanews24

ಬೆಂಗಳೂರು,: ವಿಧಾನಸಭಾ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆಯನ್ನು ಸ್ವೀಕರಿಸಬೇಕು ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯ ಮಾಡಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಅವರು ಶಾಸಕರ ರಾಜೀನಾಮೆ ಪತ್ರವನ್ನು ಹರಿದು ಹಾಕಿದ್ದಾರೆ. ಆದರೆ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಶನಿವಾರದಂದು ಕಾಂಗ್ರೆಸ್- ಜೆಡಿಎಸ್ ನ ಅತೃಪ್ತ ಶಾಸಕರು ರಾಜೀನಾಮೆ ಸಲ್ಲಿಸಿದ್ದರು. ಮಂಗಳವಾರದಂದು ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ್ದ ಸ್ಪೀಕರ್, ಐವರ ರಾಜೀನಾಮೆ ಪತ್ರ ಕ್ರಮವಾಗಿದೆ. ಉಳಿದ ಎಂಟು ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲ.ಆದ್ದರಿಂದ ಸ್ವತಃ ಅವರೇ ಬಂದು ರಾಜೀನಾಮೆ ಸಲ್ಲಿಸಬೇಕು ಎಂದು ಹೇಳಿದ್ದರು.

ಅತೃಪ್ತ ಶಾಸಕರ ರಾಜೀನಾಮೆ ಸ್ವೀಕರಿಸಲು ವಿಧಾನಸಭಾ ಅಧ್ಯಕ್ಷರು ತಡ ಮಾಡುತ್ತಿರುವುದು ಸರಿವಿಲ್ಲ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಲು ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿ ಮಾಡುವ ಬಗ್ಗೆ ಬಿಜೆಪಿಯಿಂದ ಚಿಂತನೆ ನಡೆದಿದೆ ಎಂದು ಯಡಿಯೂರಪ್ಪ ಅವರು ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

18 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

3 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago