ಬೆಂಗಳೂರು: ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದ ಪಡಬೇಕು ಎಂದು ವಿಧಾನಸಭೆ ಅಧಿವೇಶನದಲ್ಲಿ ತಾವು ನೀಡಿದ್ದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರು ಕ್ಷಮೆ ಕೋರಿದ್ದಾರೆ.
ಸದನದಲ್ಲಿ ಅತಿವೃಷ್ಟಿ ಕುರಿತು ಮಾತನಾಡುತ್ತಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಎಲ್ಲರೂ ಮಾತನಾಡಬೇಕು ಎನ್ನುತ್ತಾರೆ ಆದರೆ ಇದು ನಿಮ್ಮದೇ ಸದನ, ಈಗ ನನ್ನ ಪರಿಸ್ಥಿತಿ ಹೇಗಾಗಿದೆ ಅಂದರೆ ಲೆಟ್ಸ್ ಎಂಜಾಯ್ದ ಸಿಚುಯೇಷನ್ ಅನ್ನೋ ರೀತಿ ಆಗಿದೆ ರಮೇಶ್ ಕುಮಾರ್ ಅವರೇ’ ಎಂದು ಹೇಳಿದರು.
ಈ ವೇಳೆ ತಮ್ಮ ಹೆಸರು ಪ್ರಸ್ತಾಪಿಸಿದ್ದಕ್ಕೆ ಎದ್ದು ನಿಂತು ಪ್ರತಿಕ್ರಿಯಿಸಿದ ರಮೇಶ್ ಕುಮಾರ್ , ದೆರ್ ಈಸ್ ಎ ಸೇಯಿಂಗ್, ವೆನ್ ರೇಪ್ ಈಸ್ ಇನೆವಿಟೆಬಲ್ ಲೆಟ್ ಲೇಡೌನ್ ಅಂಡ್ ಎಂಜಾಯ್( ರೇಪ್ ಆಗುವಾಗ ತಡೆಯಲು ಆಗದಿದ್ದರೆ ಮಲಗಿಕೊಂಡು ಎಂಜಾಯ್ ಮಾಡಬೇಕು) ಎಂದು ಹೇಳಿದ್ದರು. ಇದಕ್ಕೆ ಸ್ವೀಕರ್ ನಕ್ಕುಬಿಟ್ಟಿದ್ದರು.
ಇಂತಹ ಹೇಳಿಕೆಗಳು ಬಂದರೂ ಸದನದಲ್ಲಿದ್ದ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಈ ಹೇಳಿಕೆ ಸಹಜ ವಿದ್ಯಮಾನ ಎನ್ನುವಂತೆ ವರ್ತಿಸಿದರು.
ಆದರೆ ಇದು ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಗುರುವಾರ ರಾತ್ರಿ ಟ್ವೀಟ್ ಮಾಡಿರುವ ರಮೇಶ್ ಕುಮಾರ್ ಅವರು ” ತಮ್ಮ ಹೇಳಿಕೆಗೆ ಎಲ್ಲರಲ್ಲಿಯೂ ಕ್ಷಮೆಯಾಚಿಸುತ್ತೇನೆ. ಮುಂದೆ ನಾನು ನನ್ನ ಮಾತುಗಳಲ್ಲಿ ಎಚ್ಚರ ವಹಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…