ರಾಷ್ಟ್ರ ನ್ಯೂಸ್

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಓಕೆ

ಹನ್ನೆರಡು ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲು ಕೇಂದ್ರ ಸರಕಾರ ನಿರ್ಧರಿಸಿದೆ. 

ಈ ಸಂಬಂಧ ಶನಿವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸುಗ್ರೀವಾಜ್ಞೆಗೆ ತಿದ್ದುಪಡಿ ತರಲು ಅನುಮೋದನೆ ನೀಡಲಾಯಿತು. 

ಐದು ದಿನಗಳ ವಿದೇಶ ಪ್ರವಾಸ ಮುಗಿಸಿ ಹೊಸದಿಲ್ಲಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೆಲವೇ ಗಂಟೆಗಳಲ್ಲಿ ನಡೆಸಿದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕಠುವಾ ಹಾಗೂ ಉತ್ತರ ಪ್ರದೇಶದ ಉನ್ನಾವೊದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. 

12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. 

16 ವರ್ಷ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಜೀವಾವಧಿ ಶಿಕ್ಷೆ ಶಿಕ್ಷೆ ವಿಧಿಸಲು ಅನುಮತಿ ನೀಡಲಾಗಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶ ಇಲ್ಲ ಎಂದು ಕಾಯಿದೆಯಲ್ಲಿ ತಿಳಿಸಲಾಗಿದೆ. 

ಇಂಥ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ನಿಟ್ಟಿನಲ್ಲಿ ಮಕ್ಕಳನ್ನು ಲೈಂಗಿಕ ದೌರ್ಜನ್ಯಗಳಿಂದ ರಕ್ಷಿಸುವ ಪೋಕ್ಸೊ ಕಾಯಿದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ತಯಾರಿ ನಡೆಸಲಾಗಿದೆ. 

ಪ್ರಸಕ್ತ ಇರುವ ಕಾನೂನಿನ ಪ್ರಕಾರ, ಯಾವುದೇ ಗಂಭೀರ ಲೈಂಗಿಕ ಅಪರಾಧಕ್ಕೂ ಗರಿಷ್ಠ ಜೀವನಪೂರ್ತಿ ಜೈಲು ಶಿಕ್ಷೆಯನ್ನಷ್ಟೇ ವಿಧಿಸಬಹುದು. ಕನಿಷ್ಠ ಶಿಕ್ಷೆ ಏಳು ವರ್ಷದ ಜೈಲು ಶಿಕ್ಷೆ ವಿಧಿಸಬಹುದಾಗಿದೆ. 

ಸುಗ್ರೀವಾಜ್ಞೆ ಹೊರಡಿಸುವ ಕುರಿತು ಕೇಂದ್ರ ಸರಕಾರ ಈಗಾಗಲೇ ಸುಪ್ರೀಂಕೋರ್ಟ್‌ಗೂ ಮಾಹಿತಿ ನೀಡಿದೆ. 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago