ಶಿವಮೊಗ್ಗ : “ಅತ್ಯಾಚಾರಿಗಳಿಗೆ, ದುಷ್ಕೃತ್ಯ ಮಾಡುವವರಿಗೆ ಸರ್ಕಾರ ಹಾಗೂ ಪೊಲೀಸ್ ಭಯವಿಲ್ಲ. ಭಯ ಹುಟ್ಟುವ ಕಾನೂನು ತರುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ, ಜಾರಿಗೆ ತರುತ್ತೇವೆ” ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರು ವರ್ಷದ ಕಂದಮ್ಮನ ಮೇಲೂ ಈ ಹಿಂದೆ ಅತ್ಯಾಚಾರ ಮಾಡಿದ್ದ ಘಟನೆ ನಡೆದಿದ್ದು, ನಾನು ವಿಧಾನ ಪರಿಷತ್ ಸದಸ್ಯನಾಗಿದ್ದ ಅವಧಿಯಲ್ಲಿ ಕಾನೂನು ತಿದ್ದುಪಡಿಯ ಬಗ್ಗೆ ಚರ್ಚೆಯಾಗಿತ್ತು. ಅಂದಿನ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ ಜಾರ್ಜ್ ಅವರು ಕಾನೂನು ತಿದ್ದುಪಡಿ ಮಾಡುತ್ತೇನೆ ಎಂದಿದ್ದರು. ಆದರೆ ತಿದ್ದುಪಡಿ ಆಗಲಿಲ್ಲ. ಇವತ್ತಿನವರೆಗೂ ಅದೇ ಕಾನೂನು ಮುಂದುವರೆದಿದೆ” ಎಂದರು.
ಇನ್ನು ಅತ್ಯಾಚಾರ ಮಾಡುವ ನೀಚರಿಗೆ ಶಿಕ್ಷೆ ನೀಡಲು ಕಾನೂನು ತಿದ್ದುಪಡಿಯಾಗಬೇಕು. ಕಾನೂನು ತಿದ್ದುಪಡಿ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನೇಂದ್ರ ಅವರ ಕೆಲವು ಮಾತುಗಳು ಯಾರಿಗೂ ನೋವುಂಟು ಮಾಡಲು ಹೇಳಿದ್ದಲ್ಲ. ಮನಸ್ಸಿನ ಭಾವನೆಯಲ್ಲಿ ಯಾರಿಗೂ ಅಪಮಾನ ಮಾಡುವ ಉದ್ದೇಶ ಹೊಂದಿರಲಿಲ್ಲ. ಅದರ ಬಗ್ಗೆ ಯಾವ ದೃಷ್ಟಿಯಲ್ಲಿ ಯೋಚನೆ ಮಾಡುತ್ತೇವೆಯೋ ಹಾಗೇ ಆಗುತ್ತದೆ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…