ಹೈದರಾಬಾದ್ : ಅತ್ಯಾಚಾರಿ ಆರೋಪಿಗಳನ್ನು ಎನ್ಕೌಂಟರ್ ಮಾಡಿದ್ದು ಸರಿಯಲ್ಲ ಎಂದು ಕೇಂದ್ರ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಎನ್ಕೌಂಟರ್ ಅನ್ನು ಖಂಡಿಸಿದ್ದಾರೆ.
ತೆಲಂಗಾಣ ಪಶುವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಗಲ್ಲಿಗೇರಿಸಿ ಎನ್ನುವ ಕೂಗು ಕೇಳಿ ಬರುತ್ತಿರುವಾಗಲೇ, ಎಲ್ಲ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕ್ರಮಕ್ಕೆ ಕೆಲವರು ಶ್ಲಾಘನೆ ವ್ಯಕ್ತಪಡಿಸಿದರೆ ಇನ್ನೂ ಕೆಲವರು ಅಪಸ್ವರ ಎತ್ತಿದ್ದಾರೆ. ಕೇಂದ್ರ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಕೂಡ ಎನ್ಕೌಂಟರ್ಅನ್ನು ಖಂಡಿಸಿದ್ದಾರೆ.
ಅತ್ಯಾಚಾರ ಹಾಗೂ ಕೊಲೆ ಆರೋಪಿಗಳಾದ ಆರೀಫ್, ಶಿವ, ಚನ್ನಕೇಶವಲು ಹಾಗೂ ನವೀನ್‌ನನ್ನು ಪೊಲೀಸರು ಪ್ರಕರಣ ಸಂಬಂಧ ತೀವ್ರ ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಆರೋಪಿಗಳು ಘಟನೆಯ ಇಂಚಿಂಚು ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೆ ಇಂದು ಮುಂಜಾನೆ ಆರೋಪಿಗಳನ್ನು ಕೊಲೆ ನಡೆದ ಸ್ಥಳದ ಮಹಜರಿಗಾಗಿ ಪೊಲೀಸರು ಕರೆದೊಯ್ದಿದ್ದರು.
ಶಾದ್‌ನಗರದ ಚಟಾನ್‌ಪಲ್ಲಿ ಬ್ರಿಡ್ಜ್ ಮೇಲೆ ಆರೋಪಿಗಳು ಪರಾರಿಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ನಾಲ್ವರು ಅತ್ಯಾಚಾರಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.ಈ ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮಾಡಿರುವ ಕಾರ್ತಿ, “ಅತ್ಯಾಚಾರ ಎನ್ನುವುದು ಘೋರ ಅಪರಾಧ. ಇಂಥ ಪ್ರಕರಣ ಕಾನೂನಿನ ಅಡಿಯಲ್ಲೇ ಇತ್ಯರ್ಥವಾಗಬೇಕು. ಅತ್ಯಾಚಾರಿಗಳ ಬಗ್ಗೆ ನನಗೆ ಯಾವುದೇ ಅನುಕಂಪ ಇಲ್ಲ. ಆದರೆ, ಎನ್ಕೌಂಟರ್ ಎನ್ನುವುದು ನಮ್ಮ ವ್ಯವಸ್ಥೆಗೆ ಕಪ್ಪುಚುಕ್ಕೆ. ತ್ವರಿತ ನ್ಯಾಯದ ನೀಡುವ ವಿಚಾರ ನನಗೆ ಅರ್ಥವಾಗುತ್ತದೆ. ಆದರೆ, ಇದು ಸರಿಯಾದ ಮಾರ್ಗ ಅಲ್ಲ,” ಎಂದಿದ್ದಾರೆ.
ಕಾರ್ತಿ ಟ್ವಿಟ್ಗೆ ಭಾರೀ ವಿರೋಧ ವ್ಯಕ್ತವಾಗಿದೆ. ಓರ್ವ ರಾಜಕಾರಣಿಯಾಗಿ ನೀವು ಹೇಳುತ್ತಿರುವುದು ಎಷ್ಟು ಸರಿ? ನಿಮ್ಮ ಕುಟುಂಬದವರಿಗೆ ಈ ರೀತಿ ಆಗಿದ್ದರೆ ಸುಮ್ಮನಿರುತ್ತಿದ್ದಿರಾ? ಎಂದು ಪ್ರಶ್ನೆ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…