ಬಂಟ್ವಾಳ: ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆದಿದೆ.
ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಕಾಲೇಜು ವಿದ್ಯಾರ್ಥಿನಿಯನ್ನು ಸಹಪಾಠಿಗಳೇ ಅತ್ಯಾಚಾರ ಮಾಡಿರುವುದು ಖಂಡನೀಯ. ಪ್ರತಿಬಾರಿ ಮಹಿಳೆಯರ ಮೇಲೆ ದೌರ್ಜನ್ಯಗಳಾದಾಗ ಧರ್ಮದ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದ ಸಂಘಟನೆಗಳು ಮೌನವಾಗಿರುವುದು ಹಲವಾರು ಸಂದೇಹಕ್ಕೆ ಎಡೆಮಾಡಿ ಕೊಟ್ಟಿದೆ ಎಂದು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯಬಾರದು. ಅತ್ಯಾಚಾರ ಆರೋಪಿಗಳ ಪರವಾಗಿ ಯಾವ ವಕೀಲರು ವಾದ ಮಾಡದಂತೆ ರಮಾನಾಥ ರೈ ಮನವಿ ಮಾಡಿದ್ದಾರೆ.
ಈ ವೇಳೆ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್, ಎಂ.ಎಸ್. ಮಹಮ್ಮದ್, ರಾಜಶೇಖರ ನಾಯಕ್, ಐಡಾ ಸುರೇಶ್, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಲುಕ್ಮಾನ್, ಮಹಮ್ಮದ್ ನಂದರಬೆಟ್ಟು, ಸಂಜೀವ ಪೂಜಾರಿ, ಸಿದ್ದೀಕ್ ಗುಡ್ಡೆಯಂಗಡಿ, ಪ್ರಶಾಂತ್ ಕುಲಾಲ್ ಮೊದಲಾದವವರು ಭಾಗಿಯಾಗಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…