ಬೆಂಗಳೂರು : ತನ್ನ ಸಹ ಕಲಾವಿದಯ ಮೇಲೆ ಅತ್ಯಾಚಾರ ಎಸೆಗಿರುವ ಆರೋಪದ ಮೇಲೆ ಇದೀಗ ಕಿರುತೆರೆ ನಟ ಮಡೇನೂರು ಮನು ವಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 3ನೇ ACMM ಕೋರ್ಟ್ ಆದೇಶ ಹೊರಡಿಸಿದೆ.
5 ದಿನಗಳ ಪೊಲಿಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು. ಮೆಡಿಕಲ್ ಟೆಸ್ಟ್ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರು ಮನು ಪರ ವಕೀಲರಿಗೆ ಕೆಲ ಪ್ರಶ್ನೆ ಕೇಳಿದರು.
ಈ ಪ್ರಶ್ನೆಗೆ, ನನ್ನ ಕಕ್ಷಿದಾರರು ರಿಯಾಲಿಟಿ ಶೋನಲ್ಲಿ ಅಭಿನಯಿಸಿದ್ದಾರೆ. ಮದುವೆಯಾಗಿದೆ, ಆದರೆ ದೂರುದಾರೆ ಬೇರೆಯವರು ಎಂದು ಉತ್ತರ ನೀಡಿದರು. ದೂರುದಾರೆಗೆ ಮದುವೆ ಆಗಿದ್ಯಾ ಎಂದು ಕೇಳಿದ್ದಕ್ಕೆ ಸಂತ್ರಸ್ತೆಯ ಪರ ವಕೀಲೆ ಮೊಬೈಲ್‌ನಲ್ಲಿರುವ ಕೆಲ ವಿಡಿಯೋವನ್ನು ನ್ಯಾಯಾಲಯಕ್ಕೆ ನೀಡಿದರು. ಅಂತಿಮವಾಗಿ ಕೋರ್ಟ್ 14 ದಿನಗಳ ಕಾಲ ಮನುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…