Featured

ಅತ್ಯಾಚಾರ ಪ್ರಕರಣ : ಜೈಲಿನಿಂದ ಮಡೆನೂರು ಮನು ರಿಲೀಸ್ – vishwanews24

ಅತ್ಯಾಚಾರ ಪ್ರಕರಣ : ಜೈಲಿನಿಂದ ಮಡೆನೂರು ಮನು ರಿಲೀಸ್

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು  ಶನಿವಾರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ಪರಪ್ಪನ ಅಗ್ರಹಾರ ಜೈಲು ಸೇರಿ ನ್ಯಾಯಾಂಗ ಬಂಧನದಲ್ಲಿದ್ದ ಮನು ಇಂದು ರಿಲೀಸ್ ಆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಶಿವಣ್ಣ, ದರ್ಶನ್ ಹಾಗೂ ಧ್ರುವ ಸರ್ಜಾ ಬಗ್ಗೆ ಮಾತನಾಡಿರುವ ಆಡಿಯೋ ನನ್ನದಲ್ಲ. ನಾನು ಮೊದಲು ಶಿವಣ್ಣ ಅವರನ್ನು ಭೇಟಿ ಮಾಡಿ ಅವರಿಗೆ ನಡೆದ ಎಲ್ಲಾ ಘಟನೆಯನ್ನು ತಿಳಿಸುತ್ತೇನೆ. ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆ. ಐದಾರು ಮಂದಿ ಸೇರಿಕೊಂಡು ನನ್ನ ಮೇಲೆ ಪ್ಲಾನ್ ಮಾಡಿ ಈ ರೀತಿ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಾಕಷ್ಟು ಅಡೆತಡೆಗಳ ನಡುವೆ ಸಿನಿಮಾ ರಿಲೀಸ್ ಆಯ್ತು. ನನ್ನ ವಿರುದ್ಧ ಪ್ರತಿ ಹಂತದಲ್ಲಿಯೂ ಷಡ್ಯಂತ್ರ ನಡೆದಿದೆ. ಸಿನಿಮಾ ರಿಲೀಸ್‌ಗೂ ಮೊದಲೇ ಕುಣಿಗಲ್ ಬಳಿ ಮೊಟ್ಟೆ ಹೊಡೆದಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದಿದ್ದಾರೆ. ಅವರೇ ನನ್ನ ಮೇಲೆ ಕೇಸ್ ಮಾಡಿದ್ದಾರೆ. ಏನೇ ಆದರೂ ಕಲೆ ತಾಯಿ ಶಾರದೆ ಕೈ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಅತ್ಯಾಚಾರ ಕೇಸ್‌ನಲ್ಲಿ ಕಾನೂನು ಹೋರಾಟ ಮಾಡುತ್ತೇನೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಮನು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

7 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago