ಪರಪ್ಪನ ಅಗ್ರಹಾರ ಜೈಲು ಸೇರಿ ನ್ಯಾಯಾಂಗ ಬಂಧನದಲ್ಲಿದ್ದ ಮನು ಇಂದು ರಿಲೀಸ್ ಆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಶಿವಣ್ಣ, ದರ್ಶನ್ ಹಾಗೂ ಧ್ರುವ ಸರ್ಜಾ ಬಗ್ಗೆ ಮಾತನಾಡಿರುವ ಆಡಿಯೋ ನನ್ನದಲ್ಲ. ನಾನು ಮೊದಲು ಶಿವಣ್ಣ ಅವರನ್ನು ಭೇಟಿ ಮಾಡಿ ಅವರಿಗೆ ನಡೆದ ಎಲ್ಲಾ ಘಟನೆಯನ್ನು ತಿಳಿಸುತ್ತೇನೆ. ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆ. ಐದಾರು ಮಂದಿ ಸೇರಿಕೊಂಡು ನನ್ನ ಮೇಲೆ ಪ್ಲಾನ್ ಮಾಡಿ ಈ ರೀತಿ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಾಕಷ್ಟು ಅಡೆತಡೆಗಳ ನಡುವೆ ಸಿನಿಮಾ ರಿಲೀಸ್ ಆಯ್ತು. ನನ್ನ ವಿರುದ್ಧ ಪ್ರತಿ ಹಂತದಲ್ಲಿಯೂ ಷಡ್ಯಂತ್ರ ನಡೆದಿದೆ. ಸಿನಿಮಾ ರಿಲೀಸ್‌ಗೂ ಮೊದಲೇ ಕುಣಿಗಲ್ ಬಳಿ ಮೊಟ್ಟೆ ಹೊಡೆದಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದಿದ್ದಾರೆ. ಅವರೇ ನನ್ನ ಮೇಲೆ ಕೇಸ್ ಮಾಡಿದ್ದಾರೆ. ಏನೇ ಆದರೂ ಕಲೆ ತಾಯಿ ಶಾರದೆ ಕೈ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ಅತ್ಯಾಚಾರ ಕೇಸ್‌ನಲ್ಲಿ ಕಾನೂನು ಹೋರಾಟ ಮಾಡುತ್ತೇನೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಮನು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…