ಬೆಂಗಳೂರು: ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು 2 ವಾರಗಳ ಕಾಲ ಹೈಕೋರ್ಟ್ ಮುಂದೂಡಿದೆ.
ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ನೋಟೀಸ್ ನೀಡಿದೆ. ಜೊತೆಗೆ 2 ವಾರಗಳ ಕಾಲ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.
ಸರ್ಕಾರದ ಪರ ಎಸ್‌ಪಿಸಿ ಜಗದೀಶ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲರು ಹಾಜರಿದ್ದರು, ಪ್ರಜ್ವಲ್ ಪರ ವಕೀಲರು ಅರ್ಜಿಯ ವಿಚಾರಣೆ ತ್ವರಿತವಾಗಿ ನಡೆಸುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡರು. ಈ ಮನವಿಗೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ. ಇದೀಗ ಜಾಮೀನು ಅರ್ಜಿ ವಿಚಾರಣೆಯನ್ನು 2 ವಾರಗಳ ಕಾಲ ಮುಂದೂಡಲಾಗಿದೆ ಎಂದು ಆದೇಶಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…