Featured

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌ – vishwanews24

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌

ಬೆಂಗಳೂರು:  ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ.

ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ದೋಷಿ ಎಂದು ತೀರ್ಪು ಪ್ರಕಟಿಸಿದೆ. ಆದರೆ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು? ಎಂಬುದನ್ನು ನ್ಯಾಯಾಲಯ ಇನ್ನಷ್ಟೇ ಪ್ರಕಟಿಸಬೇಕಿದೆ. ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ. ಜಡ್ಜ್ ಸಂತೋಷ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲರ್ ರೇವಣ್ಣ ಕಣ್ಣೀರಿಟ್ಟಿದ್ದಾರೆ ಎಂದು ವರದಿಯಾಗಿದೆ.

ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜುಲೈ 30 ರಂದೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಬೇಕಿತ್ತು. ಆದರೆ, ಕೆಲವೊಂದು ಸ್ಪಷ್ಟೀಕರಣ ಬೇಕಿದ್ದರಿಂದ ತೀರ್ಪನ್ನು ಕಾಯ್ದಿರಿಸುತ್ತಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದರು.

ಕೆಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಈಗಾಗಲೇ ಜಾಮೀನು ದೊರೆತಿದೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago