ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ವಿಶೇಷ ತನಿಖಾ ದಳ ‘ಬಿ’ ರಿಪೋರ್ಟ್ ಸಲ್ಲಿಸಿದೆ.
ಯುವತಿ ಕೊಟ್ಟ ದೂರಿನಲ್ಲಿ ಯಾವುದೇ ಹುರುಳಿಲ್ಲ, ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂದು ಹೇಳಲಾಗಿದೆ. ಇದರಿಂದ ಅತ್ಯಾಚಾರ ಪ್ರಕರಣದಲ್ಲಿ ಜಾರಕಿಹೊಳಿ ಬಚಾವಾಗಿದ್ದಾರೆ.
ನಿನ್ನೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನಲೆ ಎಸ್‌ಐಟಿ ಯಿಂದ ತನಿಖಾವರದಿ ಸಲ್ಲಿಕೆಯಾಗಿದೆ. ಯುವತಿ ನೀಡಿದ್ದ ದೂರು ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾಗಿತ್ತು. ತನಿಖಾಧಿಕಾರಿ ಎಸಿಪಿ ಕವಿತಾ ಅವರಿಂದ ತನಿಖೆ ನಡೆದಿತ್ತು. ಇದರ ನೇತೃತ್ವವನ್ನು ಐಜಿಪಿ ಸೌಮೆಂದು ಮುಖರ್ಜಿ ವಹಿಸಿದ್ದರು. ಎಸ್‌ಐಟಿ ಒಟ್ಟು 150 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಹಲವು ವಿಚಾರಗಳನ್ನು ತಿಳಿಸಿದೆ. ಕಳೆದ ವರ್ಷ ಸಿಡಿ ಬಹಿರಂಗಗೊಂಡ ಹಿನ್ನೆಲೆ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…